545 ಪಿಎಸ್‌ಐ ನೇಮಕಾತಿ ಮರುಪರೀಕ್ಷೆಯ ಮಾರ್ಗಸೂಚಿ ಬಿಡುಗಡೆ, ಇಲ್ಲಿದೆ ಸಂಪೂರ್ಣ ವಿವರ

PSI Exam Guidelines : 545 ಪಿಎಸ್​ಐ ಹುದ್ದೆಗಳಿಗೆ ಜನವರಿ 23 ರಂದು ಮರುಪರೀಕ್ಷೆ ನಡೆಯಲಿದೆ. ಹೀಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಲಾಗಿದೆ. ಹಾಗಾದ್ರೆ ಪರೀಕ್ಷಾ ಅಭ್ಯರ್ಥಿಗಳಿಗಿರೋ ಸೂಚನೆಗಳೇನು ಎನ್ನುವ ವಿವರ ಇಲ್ಲಿದೆ.

545 ಪಿಎಸ್‌ಐ ನೇಮಕಾತಿ ಮರುಪರೀಕ್ಷೆಯ ಮಾರ್ಗಸೂಚಿ ಬಿಡುಗಡೆ, ಇಲ್ಲಿದೆ ಸಂಪೂರ್ಣ ವಿವರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 16, 2024 | 10:59 PM

ಬೆಂಗಳೂರು, (ಜನವರಿ 16): ಇದೇ ಜನವರಿ 23 ರಂದು 545 ಪಿಎಸ್​ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಭ್ಯರ್ಥಿಗಳಿಗೆ ಪರೀಕ್ಷೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹಾಗಾದ್ರೆ ಪರೀಕ್ಷಾ ಅಭ್ಯರ್ಥಿಗಳಿಗಿರೋ ಸೂಚನೆಗಳೇನು ಎನ್ನುವುದನ್ನು ನೋಡುವುದಾರೆ, ಕಾಲರ್ ರಹಿತ ಶರ್ಟ್ ಹಾಗೂ ಜೇಬುಗಳು ಕಮ್ಮಿ ಇರುವ ಪ್ಯಾಂಟ್ ಗಳು ಬಳಸಲು ಸೂಚನೆ ನೀಡಲಾಗಿದೆ. ಅಲ್ಲದೇ ಕುರ್ತಾ ಪೈಜಾಮು, ಜೀನ್ಸ್ ಪ್ಯಾಂಟ್ ಗಳಿಗೆ ಅನುಮತಿ ಇಲ್ಲ.

ಇದನ್ನೂ ಓದಿ: ಇನ್ನು 15 ದಿನಕ್ಕೆ 545 ಪಿಎಸ್‌ಐ ನೇಮಕಾತಿ ಮರುಪರೀಕ್ಷೆ, ವೇಳಾಪಟ್ಟಿ ಹೀಗಿದೆ

 ಮಾರ್ಗಸೂಚಿ ಹೀಗಿದೆ

  • ಶರ್ಟ್ ಅಥವಾ ಪ್ಯಾಂಟ್ ಗಳಿಗೆ ಜಿಪ್ ಪ್ಯಾಕೆಟ್ ಗಳು, ದೊಡ್ಡ ದೊಡ್ಡ ಗುಂಡಿಗಳು, ಎಕ್ಸ್ಟ್ರಾ ಡಿಸೈನ್ ಇರಬಾರದು.
  •  ಪರೀಕ್ಷಾ ಹಾಲ್ ಗೆ ಶೂ ಹಾಕಿಕೊಂಡು ಹೋಗುವುದು ನಿಷೇಧಿಸಲಾಗಿದ್ದು, ಸ್ಯಾಂಡಲ್ ಅಥವಾ ತೆಳುವಾದ ಚಪ್ಪಲಿ ಬಳಕೆಗೆ ಸೂಚನೆ ನೀಡಲಾಗಿದೆ.
  • ಚೈನ್, ಕಿವಿಯೋಲೆ, ಉಂಗುರ, ಕೈ ಕಡಗ ಧರಿಸಲು ನಿಷೇಧಿಸಲಾಗಿದೆ.
  • ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರ ಹಾಲ್ ಗೆ ಪ್ರವೇಶವಿಲ್ಲ.
  • ಯಾವುದೇ ರೀತಿಯಾದ ಅಹಾರ, ನೀರಿನ ಬಾಟಲಿಗೆ ಅವಕಾಶ ಇಲ್ಲ. ಬದಲಿಗೆ ಪರೀಕ್ಷಾ ಕೇಂದ್ರದಲ್ಲಿಯೇ ನೀರು ಕುಡಿಯಲು ವ್ಯವಸ್ಥೆ.
  • ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್ ಗಳು ಪರೀಕ್ಷಾ ಕೇಂದ್ರಕ್ಕೆ ನಿಷೇಧ.
  • ಎಲ್ಲಾ ಅಭ್ಯರ್ಥಿಗಳಿಗೆ ಹ್ಯಾಟ್ ಧರಿಸದಂತೆ ಸೂಚನೆ.
  • ಎಲ್ಲರಿಗೂ ಮಾಸ್ಕ್ ಧರಿಸದಂತೆ ಸೂಚನೆ.
  • ಪ್ರವೇಶ ಪತ್ರ ಕಡ್ಡಾಯವಾಗಿ ತರಬೇಕು.
  • ಸರ್ಕಾರದಿಂದ ಮಾನ್ಯವಾದ ಗುರುತಿನ ಚೀಟಿ ಕಡ್ಡಾಯ.
  • ಕೊನೆಯ ಬೆಲ್ ಹೊಡೆಯೋವರೆಗೂ ಪರೀಕ್ಷಾ ಹಾಲ್​ನಿಂದ ಅಭ್ಯರ್ಥಿಗಳು ಹೊರ ಹೋಗುವಂತಿಲ್ಲ.

ಮಹಿಳಾ ಅಭ್ಯರ್ಥಿಗಳಿಗೆ ಸಹ ಪ್ರತ್ಯೇಕ ಮಾರ್ಗಸೂಚಿ

  • ದೊಡ್ಡ ದೊಡ್ಡ ಡಿಸೈನ್, ಬಟನ್ ಇರೋ, ಹೂಗಳು ಇರೋ ಬಟ್ಟೆ ಧರಿಸುವಂತಿಲ್ಲ.
  • ಪೂರ್ಣ ತೋಳಿನ ಬಟ್ಟೆ ಬಳಸದಂತೆ ಸೂಚನೆ
  • ಮುಜುಗರವಾಗದಂತೆ ಅರ್ಧ ತೋಳಿನ‌ ಬಟ್ಟೆ ಬಳಸಬೇಕು
  • ಇನ್ನೊಬ್ಬರಿಗೆ ಮುಜುಗರವಾಗದಂತೆ ಟಾಪ್ ಗಳು ಬಳಸಲು ಸೂಚನೆ.
  • ಹೈ ಹೀಲ್ಸ್ ಚಪ್ಪಲಿ-ಶೂ ನಿಷೇಧ.
  • ಮಹಿಳಾ ಅಭ್ಯರ್ಥಿಗಳಿಗೂ ಕೂಡ ಯಾವುದೇ ರೀತಿಯ ಲೋಹ, ಚೈನ್ ಬಳಸದಂತೆ ಸೂಚನೆ.
  • ಮಂಗಳ ಸೂತ್ರ, ಕಾಲುಂಗುರ ಬಳಸಲು ಅನುಮತಿ.

Published On - 10:41 pm, Tue, 16 January 24

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ