Kannada News Employment Karnataka examination authority releases guidelines For 545 PSI reexam On Jan 23rd
545 ಪಿಎಸ್‌ಐ ನೇಮಕಾತಿ ಮರುಪರೀಕ್ಷೆಯ ಮಾರ್ಗಸೂಚಿ ಬಿಡುಗಡೆ, ಇಲ್ಲಿದೆ ಸಂಪೂರ್ಣ ವಿವರ
PSI Exam Guidelines : 545 ಪಿಎಸ್‌ಐ ಹುದ್ದೆಗಳಿಗೆ ಜನವರಿ 23 ರಂದು ಮರುಪರೀಕ್ಷೆ ನಡೆಯಲಿದೆ. ಹೀಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಲಾಗಿದೆ. ಹಾಗಾದ್ರೆ ಪರೀಕ್ಷಾ ಅಭ್ಯರ್ಥಿಗಳಿಗಿರೋ ಸೂಚನೆಗಳೇನು ಎನ್ನುವ ವಿವರ ಇಲ್ಲಿದೆ.
ಬೆಂಗಳೂರು, (ಜನವರಿ 16): ಇದೇ ಜನವರಿ 23 ರಂದು 545 ಪಿಎಸ್‌ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಭ್ಯರ್ಥಿಗಳಿಗೆ ಪರೀಕ್ಷೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹಾಗಾದ್ರೆ ಪರೀಕ್ಷಾ ಅಭ್ಯರ್ಥಿಗಳಿಗಿರೋ ಸೂಚನೆಗಳೇನು ಎನ್ನುವುದನ್ನು ನೋಡುವುದಾರೆ, ಕಾಲರ್ ರಹಿತ ಶರ್ಟ್ ಹಾಗೂ ಜೇಬುಗಳು ಕಮ್ಮಿ ಇರುವ ಪ್ಯಾಂಟ್ ಗಳು ಬಳಸಲು ಸೂಚನೆ ನೀಡಲಾಗಿದೆ. ಅಲ್ಲದೇ ಕುರ್ತಾ ಪೈಜಾಮು, ಜೀನ್ಸ್ ಪ್ಯಾಂಟ್ ಗಳಿಗೆ ಅನುಮತಿ ಇಲ್ಲ.