AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಕಳೆದ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಇದ್ದವರನ್ನು ಒಂದು ದಿನದ ಮಟ್ಟಿಗೆ ಸೇವೆಯಿಂದ ಬಿಡುಗಡೆಗೊಳಿಸಿ ಪುನಃ ಸೇವೆಗೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Oct 08, 2021 | 8:22 PM

Share

ಬೆಂಗಳೂರು: ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಕಳೆದ ಸಾಲಿನಲ್ಲಿ ಬೇರೆ ಬೇರೆ ವಿಶ್ವ ವಿದ್ಯಾಲಯಗಳಲ್ಲಿ ಕಾರ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ನಿರ್ಧಾರ ಮಾಡಲಾಗಿದೆ. 2021- 22ನೇ ಸಾಲಿಗೂ‌ ಸೇವೆ ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಇದ್ದವರನ್ನು ಒಂದು ದಿನದ ಮಟ್ಟಿಗೆ ಸೇವೆಯಿಂದ ಬಿಡುಗಡೆಗೊಳಿಸಿ ಪುನಃ ಸೇವೆಗೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಕೊವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಈ ಮೊದಲು ಸಲಹೆ ನೀಡಿದ್ದರು. ಅಂದಿನ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದಿದ್ದರು. ರಾಜ್ಯದ 412 ಪದವಿ ಕಾಲೇಜುಗಳಲ್ಲಿ ಸುಮಾರು 14,564 ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ ನಿಯಮಾವಳಿ ಪ್ರಕಾರ, ಅತಿಥಿ ಉಪನ್ಯಾಸಕರು ವಿದ್ಯಾರ್ಹತೆಯನ್ನು ಹೊಂದಿರುತ್ತಾರೆ. ಕಳೆದ 2 ವರ್ಷಗಳಿಂದ ಕೊರೊನಾ ಹಿನ್ನೆಲೆ ಅತಿಥಿ ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು.

ಅತಿ ಕಡಿಮೆ ವೇತನ ಮತ್ತು ಸೇವಾ ಭದ್ರತೆ ಇಲ್ಲದ ಕಾರಣ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕೆಂದು ಸೂಚಿಸಿದ್ದರು. ಈಗಾಗಲೇ ಕಡಿಮೆ ವೇತನ ಮತ್ತು ಭದ್ರತೆ ಇಲ್ಲದ ಕಾರಣ ರಾಜ್ಯದಲ್ಲಿ ಹಲವಾರು ಉಪನ್ಯಾಸಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಲ್ಲಾ ವಿದ್ಯಾರ್ಹತೆ ಹೊಂದಿ, ಹಲವು ವರ್ಷಗಳ ಅನುಭವ ಅತಿಥಿ ಉಪನ್ಯಾಸಕರಿಗಿದೆ. ಹಲವಾರು ಜನ ವಯೋವಿತಿ ಮೀರುತ್ತಿರುವುದರಿಂದ ಅಭದ್ರತೆಯಲ್ಲಿ ಸಿಲುಕಿದ್ದಾರೆ ಎಂದು ವಿವರಿಸಿದ್ದರು.

ಇವರಂತೆಯೇ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹಂಗಾಮಿಯಾಗಿ ಕರ್ತವ್ಯ ನಿರ್ವಹಿಸಿದ ಪದನಾಮ ಬದಲಾದ ಸ್ಥಳೀಯ ಅಭ್ಯರ್ಥಿ, ಸ್ಟಾಪ್ ಗ್ಯಾಪ್, ಗುತ್ತಿಗೆ ಆಧಾರಿತ, ಅರೆಕಾಲಿಕ ಉಪನ್ಯಾಸಕರುಗಳನ್ನು ಸರ್ಕಾರ ಮಾನವೀಯತೆಯ ಆಧಾರದ ಮೇಲೆ ಸೂಕ್ತ ಕಾಯ್ದೆ ತಿದ್ದುಪಡಿ ಮಾಡಿ ಅಂಥವರನ್ನ 1982, 1992, 1996 ಮತ್ತು 2003ರಲ್ಲಿ ಖಾಯಂ ಮಾಡಿರುವ ಉದಾಹರಣೆಗಳಿವೆ. ಅದೇ ಮಾದರಿಯಲ್ಲಿ ಈಗ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನ ಖಾಯಂಗೊಳಿಸಿ. ಈ ಬಗ್ಗೆ ಸರ್ಕಾರ ಅಗತ್ಯ ಕ್ರಮ ವಹಿಸುವಂತೆ ಬಸವರಾಜ ಹೊರಟ್ಟಿ ಮುಖ್ಯಮಂತ್ರಿಗೆ ಪತ್ರದ ಬರೆದಿದ್ದರು.

ಇದನ್ನೂ ಓದಿ: ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಲು ಸೂಚನೆ; ಸಿಎಂಗೆ ಪತ್ರ ಬರೆದ ಬಸವರಾಜ ಹೊರಟ್ಟಿ

ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಹಣ ಕಬಳಿಸಿದ ಪ್ರಾಂಶುಪಾಲ; FIR ದಾಖಲು

Published On - 7:54 pm, Fri, 8 October 21

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ