ರಾಜ್ಯ ಸರ್ಕಾರದ ಹೊರ ಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ಮಹಿಳೆಯರಿಗೆ ಬಂಪರ್ ಕೊಡುಗೆ

ಸರ್ಕಾರದ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವಾಗ ಮೀಸಲಾತಿ ಕಲ್ಪಿಸಲು ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ ಡಿಸೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿತ್ತು. ಇದೀಗ ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಹೊರ ಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ಮಹಿಳೆಯರಿಗೆ ಬಂಪರ್ ಕೊಡುಗೆ
ವಿಧಾನಸೌಧ
Follow us
| Updated By: ರಮೇಶ್ ಬಿ. ಜವಳಗೇರಾ

Updated on:May 20, 2024 | 8:21 PM

ಬೆಂಗಳೂರು (ಮೇ 20): ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿಯಲ್ಲೂ ಮೀಸಲಾತಿ(reservation) ಕಲ್ಪಿಸಲು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಕಛೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯ ನೀತಿಯಾಗಿರುತ್ತದೆ. ಆದರೆ, ಇನ್ನು ಮುಂದೆ ಎಲ್ಲ ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮೀಸಲಾತಿಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳುವುದಕ್ಕೆ ಆದೇಶದಲ್ಲಿ ಸೂಚಿಸಿರುವುದು ವಿಶೇಷವಾಗಿದೆ.

ಈ ಹಿಂದೆ 2023ರ ಡಿಸೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ (Reservation in Outsourcing) ಅಳವಡಿಸಲು ಒಪ್ಪಿಗೆ ನೀಡಲಾಗಿತ್ತು. ಇದೀಗ ಅಧಿಕೃತವಾಗಿ ರಾಜ್ಯ ಸರ್ಕಾರವು ಮೀಸಲಾತಿಗೆ ಸಂಬಂಧಿಸಿ ಆದೇಶ ಹೊರಡಿಸಿದೆ. ಇನ್ನು ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಈ ಕೆಳಕಂಡ ಸೂಚನೆಗಳೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: KPSC PDO Recruitment 2024: 247 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳು -ಅರ್ಹತೆ ವಿವರ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

  •  ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
  •  ಪ್ರತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.
  • ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು.
  •  ಟೆಂಡ‌ರ್ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು. ಟೆಂಡ‌ರ್ ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು. (ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ)
  •  ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ / ಅರ್ಧದಲ್ಲಿ ಬಿಟ್ಟಿದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪ್ರವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳತಕ್ಕದ್ದು.
  •  ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು.
  • ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರತಕ್ಕದ್ದು.
  • ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ.

Published On - 8:17 pm, Mon, 20 May 24

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ