ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷ ಮುಗಿಯುವವರೆಗೆ, ಯಾವುದು ಮೊದಲು ಬರುತ್ತದೋ ಆ ಕೊರತೆ ನೀಗಿಸಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ರಾಜ್ಯಾದ್ಯಂತ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರು ಸೇರಿದಂತೆ 45,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ತನ್ನ ಅನುಮೋದನೆ ನೀಡಿದೆ.
ಈ ಕುರಿತು ಇತ್ತೀಚೆಗೆ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು, 2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕವಾಗುವವರೆಗೆ ಶಿಕ್ಷಕರ ಕೊರತೆ ನೀಗಿಸಲು ಅವಕಾಶ ಕಲ್ಪಿಸಲಾಗಿದೆ. ಖಾಯಂ ಶಿಕ್ಷಕರ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ, ಯಾವುದು ಮೊದಲು ಬರುತ್ತದೋ ಆ ಕೊರತೆ ನೀಗಿಸಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು.
ಕಳೆದ ವರ್ಷ, ರಾಜ್ಯ ಸರ್ಕಾರವು 33,000 ಅತಿಥಿ ಶಿಕ್ಷಕರನ್ನು ಶಾಲಾ ವರ್ಷದ ಆರಂಭದಲ್ಲಿ ನೇಮಕ ಮಾಡಿತು. ಆದರೆ, ಈ ವರ್ಷ ಅತಿಥಿ ಶಿಕ್ಷಕರ ನೇಮಕ ಪ್ರಕ್ರಿಯೆ ವಿಳಂಬವಾಯಿತು. ದಿ ಹಿಂದೂ ಈ ಸಂಬಂಧ ವರದಿ ಪ್ರಕಟಿಸಿದೆ.
Also Read: KEA PUC Guest lecturer recruitment 2024 – ಕರ್ನಾಟಕ ಪಿಯು ಕಾಲೇಜು ಅತಿಥಿ ಉಪನ್ಯಾಸಕರ ನೇಮಕಾತಿ
ಪ್ರಸ್ತುತ ಪ್ರೌಢಶಾಲೆಗಳಲ್ಲಿ 8,954 ವಿಷಯ ಶಿಕ್ಷಕರ ಕೊರತೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ 33863 ಶಿಕ್ಷಕರ ಕೊರತೆ ಇದೆ. ಅತಿಥಿ ಶಿಕ್ಷಕರ ನೇಮಕಾತಿಯನ್ನು ಶಾಲೆಗಳ ಮುಖ್ಯೋಪಾಧ್ಯಾಯರ ಮೂಲಕ ಮಾಡಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಖಾಲಿ ಇರುವ ಹಾಗೂ ಶಿಕ್ಷಕರಿಲ್ಲದ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆದ್ಯತೆ ನೀಡಲಾಗುವುದು.
ಆದರೆ, ವಿಶೇಷವಾಗಿ ಕರ್ನಾಟಕ ಸಾರ್ವಜನಿಕ ಶಾಲೆಗಳು, ದ್ವಿಭಾಷಾ, ಆಂಗ್ಲ ಮಾಧ್ಯಮ ತರಗತಿಗಳಿರುವ ಶಾಲೆಗಳು ಮತ್ತು ಆದರ್ಶ ವಿದ್ಯಾಲಯಗಳಲ್ಲಿ 100% ಅತಿಥಿ ಶಿಕ್ಷಕರನ್ನು ನೇಮಿಸಬೇಕು. ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ವಿಷಯಗಳ ಶಿಕ್ಷಕರ ನೇಮಕಾತಿಗೆ ಆದ್ಯತೆ ನೀಡಬೇಕು ಎಂದು ಪ್ರಕಟಣೆ ತಿಳಿಸಿದೆ.