KSSCL Recruitment 2022: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ), ಹಿರಿಯ ಸಹಾಯಕರು, ಕಿರಿಯ ಸಹಾಯಕರು ಮತ್ತು ಬೀಜ ಸಹಾಯಕರು ಹುದ್ದೆಗಳ ಭರ್ತಿ ನಡೆಯಲಿದೆ. ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ karnataka.gov.in/kea ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಅಧಿಸೂಚನೆಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ಹೆಸರು ಮತ್ತು ಸಂಖ್ಯೆ:
ವಿದ್ಯಾರ್ಹತೆ:
ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 750 ರೂ. ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 500 ರೂ. ನಿಗದಿಪಡಿಸಲಾಗಿದೆ. ಹಾಗೆಯೇ ಮಾಜಿ ಸೈನಿಕ ಅಭ್ಯರ್ಥಿಗಳಿಗೆ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 / ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 35 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ. ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಬಳಿಕ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.