Health Department Job: ಫಾಮರ್ಸಿ ಅಧಿಕಾರಿ, ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 400 ಫಾಮರ್ಸಿ ಅಧಿಕಾರಿ ಹುದ್ದೆಗಳಿಗೆ ಮತ್ತು 150 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ ಎಂದು ಸರ್ಕಾರ ಉಲ್ಲೇಖಿತ ಪತ್ರದಲ್ಲಿ ಅನುಮೋದನೆ ನೀಡಿದೆ.
ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 400 ಫಾಮರ್ಸಿ ಅಧಿಕಾರಿ ಹುದ್ದೆಗಳಿಗೆ ಮತ್ತು 150 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ ಎಂದು ಸರ್ಕಾರ ಉಲ್ಲೇಖಿತ ಪತ್ರದಲ್ಲಿ ಅನುಮೋದನೆ ನೀಡಿದೆ.
ಈ ಬಗ್ಗೆ ಸರ್ಕಾರ ಪ್ರತಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಲ್ಪಾವಧಿ ಟೆಂಡರ್ನ್ನು ನಿಯಮಾನುಸಾರವಾಗಿ ಕರೆಯಲಾಗಿದೆ ಎಂದು ಇಲಾಖೆ ಹೇಳಿದೆ. ಆಸಕ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ಹೇಳಿದೆ. ಈಗಾಗಲೇ ಅರ್ಜಿ ಸಲ್ಲಿಸಲು ಆರಂಭವಾಗಿದ್ದು ಈ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಟ್ವಿಟ್ ಮಾಡಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ 400 ಫಾರ್ಮಸಿ ಅಧಿಕಾರಿಗಳು ಹಾಗೂ 150 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.@DHFWKA pic.twitter.com/p10BfYfG7v
— Dr Sudhakar K (@mla_sudhakar) December 20, 2022
ಹುದ್ದೆಗಳು:
1. ಫಾರ್ಮಸಿ ಅಧಿಕಾರಿಗಳು 2. ಕಿರಿಯ ವೈದ್ಯಕೀಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳು
ವಿದ್ಯಾರ್ಹತೆ:
ಫಾರ್ಮಸಿ ಅಧಿಕಾರಿಗಳು: ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಪ್ಲೋಮಾ ಇನ್ ಫಾರ್ಮಸಿ ಹೊಂದಿರಬೇಕು.
ಇದನ್ನು ಓದಿ: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಕಿರಿಯ ವೈದ್ಯಕೀಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳು: ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪ್ರಯೋಗಶಾಲಾ ತಂತ್ರಜ್ಞ ತರಬೇತಿ ಹೊಂದಿರಬೇಕು. ಪಿಯುಸಿ (ವಿಜ್ಞಾನ) ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಕರ್ನಾಟಕ ಅರೆ- ವೈದ್ಯಕೀಯ ಮಂಡಳಿಯು ನಡೆಸುವ 2 ವರ್ಷ ಪ್ರಯೋಗಶಾಲಾ ತಂತ್ರಜ್ಞರ ತರಬೇತಿ ಹೊಂದಿರಬೇಕು.
ಉದ್ಯೋಗ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:30 pm, Wed, 21 December 22