KHPT Recruitment 2025: ಕೆಎಚ್‌ಪಿಟಿಯಲ್ಲಿ ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ; ಈಗಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ದೆಹಲಿ ಮತ್ತು ಬೆಂಗಳೂರಿನಲ್ಲಿ ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಸ್ನಾತಕೋತ್ತರ ಪದವಿ ಅಥವಾ ಪಿಎಚ್‌ಡಿ ಹೊಂದಿರುವ ಅಭ್ಯರ್ಥಿಗಳು ಆಗಸ್ಟ್ 25 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಧಾನ ಮತ್ತು ಅಗತ್ಯ ದಾಖಲೆಗಳ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

KHPT Recruitment 2025: ಕೆಎಚ್‌ಪಿಟಿಯಲ್ಲಿ ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ; ಈಗಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಹೆಲ್ತ್​​​​ ಪ್ರಮೋಷನ್​​​ ಟ್ರಸ್ಟ್

Updated on: Aug 19, 2025 | 5:06 PM

ಕರ್ನಾಟಕ ಹೆಲ್ತ್​​​​ ಪ್ರಮೋಷನ್​​​ ಟ್ರಸ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಪ್ರೋಗ್ರಾಂ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ದೆಹಲಿ, ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 25ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.

ಶೈಕ್ಷಣಿಕ ಅರ್ಹತೆ:

KHPT ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಪಿಎಚ್‌ಡಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣವಕಾಶ; 500ರಕ್ಕೂ ಹೆಚ್ಚು ನೇಮಕಾತಿ

ಅರ್ಜಿ ಸಲ್ಲಿಸುವುದು ಹೇಗೆ?

  • KHPT ಪ್ರೋಗ್ರಾಂ ಮ್ಯಾನೇಜರ್ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳ ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ಕೊನೆಗೆ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಕ್ಲಿಕ್ ಮಾಡಿ. ಬಹು ಮುಖ್ಯವಾಗಿ ಅರ್ಜಿಯನ್ನು ಡೌನ್ಲೋಡ್​ ಮಾಡಿ ಇಟ್ಟುಕೊಳ್ಳಿ.

ಅಧಿಕೃತ ಅಧಿಸೂಚನೆಯ PDF ಇಲ್ಲಿದೆ ನೋಡಿ: 01-Program-Manager-Post-Advt-Details-KHPT

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us