ಶಿಕ್ಷಕರಾಗಿ ಆಯ್ಕೆಯಾದವರಿಗೆ ಬಿಗ್ ಶಾಕ್: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್

| Updated By: ರಮೇಶ್ ಬಿ. ಜವಳಗೇರಾ

Updated on: Jan 30, 2023 | 5:34 PM

15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ (Teachers Recruitment) 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್, ಇದೀಗ ಆ ಪಟ್ಟಿಯನ್ನೇ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಶಿಕ್ಷಕರಾಗಿ ಆಯ್ಕೆಯಾದವರಿಗೆ ಬಿಗ್ ಶಾಕ್: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Follow us on

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ (Teachers Recruitment) ಸಂಬಂಧಿಸಿದಂತೆ 1:1 ಅನುಪಾತದಲ್ಲಿ ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಬಿಡುಗಡೆ ಮಾಡಿದೆ. ಆದ್ರೆ, ಇದೀಗ ಇದಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court) ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಆದೇಶ ಹೊರಡಿಸಿದೆ. ಇಂದು (ಜನವರಿ 30) ಹೈಕೋರ್ಟ್ ಏಕಸದಸ್ಯ ಈ ಮಹತ್ವದ ಆದೇಶ ಹೊರಡಿಸಿದ್ದು, ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿ ಶಿಕ್ಷಕರಾಗುವ ಕನಸು ಕಾಣುತ್ತಿದ್ದವರಿಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ.

Teachers Recruitment: 15,000 ಶಿಕ್ಷಕರ ನೇಮಕಾತಿ ತಾತ್ಕಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ 

ಜಾತಿ ಮತ್ತು ಆದಾಯ ಪ್ರಮಾಣಪತ್ರ ಗೊಂದಲ

ಕಳೆದ ನವೆಂಬರ್ 18 ರಂದು ಶಿಕ್ಷಣ ಇಲಾಖೆ ತಾತ್ಕಾಲಿಕ ಆಯ್ಜೆ ಪಟ್ಟಿ ಪ್ರಕಟಿಸಿತ್ತು. ಇದರಲ್ಲಿ ಇತರೆ ಹಿಂದುಳಿದ ವರ್ಗಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಂಬಂಧ ಇಲಾಖೆಯ ನಿಯಮ ಗೊಂದಲಕ್ಕೆ ಕಾರಣವಾಗಿತ್ತು. ವಿವಾಹಿತ ಮಹಿಳಾ ಅಭ್ಯರ್ಥಿಗಳ ಪತಿಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಆಧಾರವಾಗಿ ನೀಡುವಂತೆ ಸೂಚಿಸಲಾಗಿತ್ತು. ಇದನ್ನು ಪ್ರಶ್ನಿಸಿ ನೂರಾರು ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅಭ್ಯರ್ಥಿಗಳ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರ ಅನ್ವಯವಾಗಬೇಕೇ ವಿನಹ ಪತಿಯ ಜಾತಿ ಮತ್ತು ಆದಾಯ ಪ್ರಮಾಣಪತ್ರ ಅನ್ವಯವಾಗುವುದಿಲ್ಲ. ತಂದೆಯ ಜಾತಿ ಮಕ್ಕಳು ಮುಂದುವರಿಸುವುದರಿಂದ ಅದನ್ನೇ ಆಧಾರವಾಗಿ ಪರಿಗಣಿಸಬೇಕೆಂದು ಮಹಿಳಾ ಅಭ್ಯರ್ಥಿಗಳ ಪರ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ರವರಿದ್ದ ಏಕಸದಸ್ಯ ಪೀಠ, ಒಬಿಸಿ ಮಹಿಳಾ ವಿವಾಹಿತ ಅಭ್ಯರ್ಥಿಗಳ ಆಯ್ಕೆಯಲ್ಲಿ ಪತಿಯ ಬದಲು ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರ ಪರಿಗಣಿಸುವಂತೆ ಆದೇಶ ನೀಡಿದೆ. ಹೀಗಾಗಿ ಹೈಕೋರ್ಟ್ ಸೂಚನೆಯಂತೆ ಶಿಕ್ಷಣ ಇಲಾಖೆ ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸಬೇಕಿದೆ.

ಇದನ್ನೂ ಓದಿ: 15,000 ಪದವೀಧರ, ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ, ತೃತೀಯ ಲಿಂಗಿಗಳು ಆಯ್ಕೆ 

ಈ ಮೊದಲು ಶಾಲಾ ಶಿಕ್ಷಕರ ನೇಮಕಾತಿಗೆ  1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದ್ರೆ, ಇದೀಗ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನೇ ರದ್ದುಗೊಳಿಸಿ ಆದೇಶಿಸಿದೆ.

ಶಾಲಾ ಶಿಕ್ಷಣ ಆಯುಕ್ತ ಹೇಳಿದ್ದೇನು?

ಜಾತಿ ಮೀಸಲಾತಿ ಅನ್ವಯ ಹುದ್ದೆಗಳಿಗೆ ಆಯ್ಕೆ ಬಯಸುವವರು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಅವಿವಾಹಿತೆಯರು ತಂದೆಯ ಆದಾಯ, ವಿವಾಹಿತೆಯರು ಗಂಡನ ಆದಾಯ ವಿವರ ಸಲ್ಲಿಸಬೇಕು. ಆದರೆ, ಹಲವು ವಿವಾಹಿತ ಮಹಿಳೆಯರು ತಮ್ಮ ತಂದೆಯ ಅದಾಯ ಪ್ರಮಾಣ ಸಲ್ಲಿಸಿದ್ದರು. ಆದ್ದರಿಂದ ಅವರ ಅರ್ಜಿಗಳನ್ನು ತಿರಸ್ಕಾರ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತ ಆರ್ ವಿಶಾಲ್ ಹೇಳಿದ್ದರು.

ಅಭ್ಯರ್ಥಿಗಳ ವಾದವೇನು?

ರಾಜ್ಯ ಸರ್ಕಾರ ಕಳೆದ ವರ್ಷ ಮಾರ್ಚ 21ರಂದು ಹೊರಡಿಸಿದ್ದ ಅಧಿಸೂಚನೆಲ್ಲಿ ಮದುವೆಯಾದ ಮಹಿಳೆಯರು ಗಂಡನ ಆದಾಯ ಪ್ರಮಾಣ ಪತ್ರವನ್ನೇ ಸಲ್ಲಿಸಬೇಕು ಎನ್ನುವ ಕುರಿತು ಯಾವುದೇ ಸ್ಪಷ್ಟ ನಿರ್ದೆಶನ ಇರಲಿಲ್ಲ ಎನ್ನುವುದು ತಿರಸ್ಕೃತಗೊಂಡ ಅಭ್ಯರ್ಥಿಗಳ ವಾದವಾಗಿತ್ತು.

13363 ಅಭ್ಯರ್ಥಿಗಳು ಆಯ್ಕೆಯಾಗಿದ್ದರು

ಒಟ್ಟು 15000 ಪಧವೀದರ ಹುದ್ದೆಗಳ ಪೈಕಿ 13363 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. 34 ಇಂಜಿನಿಯರಿಂಗ್ ಅಭ್ಯರ್ಥಿಗಳ ಪೈಕಿ 19 ಜನರು ಆಯ್ಕೆಯಾಗಿದ್ದರು. ಲಿಂಗತ್ವ ಅಲ್ಪಸಂಖ್ಯಾತರಿಗೆ ಶಿಕ್ಷಕರ ನೇಮಕಾತಿಯಲ್ಲಿ ಶೇ.1ರಷ್ಟು ಮೀಸಲಾತಿ ನೀಡಲಾಗಿತ್ತು. ಪ್ರಪ್ರಥಮ ಬಾರಿಗೆ ಮೂವರು ಲಿಂಗತ್ವ ಅಲ್ಪಸಂಖ್ಯಾತರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಮೊದಲ ಬಾರಿಗೆ ಅರ್ಹ ಎಂಜಿನಿಯರಿಂಗ್ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. 19 ಜನರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದರು.

  •   ಹೈ-ಕ ಭಾಗದಲ್ಲಿ 5000 ಹುದ್ದೆ ಮೀಸಲು ಪೈಕಿ 4187 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
  • ಇಂಗ್ಲಿಷ್ ಭಾಷೆಯಲ್ಲಿ 1807 ಹುದ್ದೆ ಪೈಕಿ 1768 ಅಭ್ಯರ್ಥಿಗಳು ಆಯ್ಕೆ.
  • ಗಣಿತ, ವಿಜ್ಞಾನ ಭಾಷೆಯಲ್ಲಿ 6500 ಪೈಕಿ 5450 ಅಭ್ಯರ್ಥಿಗಳು ಆಯ್ಕೆ.
  • ಸಮಾಜ ವಿಜ್ಞಾನ ಭಾಷೆಯಲ್ಲಿ 4693 ಪೈಕಿ 4521 ಅಭ್ಯರ್ಥಿಗಳು ಆಯ್ಕೆ.
  • ಜೀವವಿಜ್ಞಾನ ಭಾಷೆಯಲ್ಲಿ 2000 ಹುದ್ದೆ ಪೈಕಿ 1694 ಅಭ್ಯರ್ಥಿಗಳು ಆಯ್ಕೆ

 

Published On - 4:48 pm, Mon, 30 January 23