Karnataka High Court Recruitment 2022: ಕರ್ನಾಟಕ ಹೈಕೋರ್ಟ್ ಗ್ರೂಪ್-ಡಿ ಪ್ಯೂನ್, ಕಾವಲುಗಾರ (ವಾಚ್ಮ್ಯಾನ್), ಸ್ವೀಪರ್ ಮತ್ತು ಪ್ಯೂನ್ (ಹೌಸ್ ಕೀಪಿಂಗ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್ karnatakajudiciary.kar.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಿತರ ಮಾಹಿತಿಗಳು ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 129
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
18 ರಿಂದ 25 ವರ್ಷಗಳವರೆಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಮೀಸಲಾತಿ ಹೊಂದಿರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಈ ಬಗ್ಗೆ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ ಆಯಾ ವರ್ಗಗಳ ವಯೋಮಿತಿಯನ್ನು ತಿಳಿದುಕೊಳ್ಳಬಹುದು.
ಅರ್ಜಿ ಶುಲ್ಕ:
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 19,900 ರೂ. ಯಿಂದ 63,200 ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 17, 2022
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.