AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka High Court Recruitment 2023: ಹೈಕೋರ್ಟ್​​ನಲ್ಲಿನ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ: ವೇತನ 63 ಸಾವಿರ ರೂ.

Karnataka High Court Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ವರ್ಷದಿಂದ 35 ವರ್ಷಗಳ ಒಳಗಿರಬೇಕು.

Karnataka High Court Recruitment 2023: ಹೈಕೋರ್ಟ್​​ನಲ್ಲಿನ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ: ವೇತನ 63 ಸಾವಿರ ರೂ.
Karnataka High Court Recruitment 2023
TV9 Web
| Edited By: |

Updated on:Jun 21, 2023 | 2:28 PM

Share

Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಖಾಲಿ ಹುದ್ದೆಯ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಕೇಬಲ್ ಆಪರೇಟರ್ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಯು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು. ಆಯ್ಕೆಯಾದರೆ ಸಿಗುವ ವೇತನ ಎಷ್ಟು? ಈ  ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಈ ನೇಮಕಾತಿ ಕುರಿತಾದ ಸಂಕ್ಷಿಪ್ತ ಮಾಹಿತಿ:

  • ಸಂಸ್ಥೆಯ ಹೆಸರು : ಕರ್ನಾಟಕ ಹೈಕೋರ್ಟ್
  • ಹುದ್ದೆಗಳ ಸಂಖ್ಯೆ: 1
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಕೇಬಲ್ ಆಪರೇಟರ್

ಶೈಕ್ಷಣಿಕ ಅರ್ಹತೆ:

ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್/ಐಟಿ ಅಥವಾ ಎಸ್​ಎಸ್​ಎಲ್​ಸಿಯಲ್ಲಿ ಪಾಸ್ ಆಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 35 ವರ್ಷಗಳ ಒಳಗಿರಬೇಕು.

ವಯೋಮಿತಿ ಸಡಿಲಿಕೆ:

  • ಕ್ಯಾಟ್-IIA/IIB/IIIA & IIIB ಅಭ್ಯರ್ಥಿಗಳಿಗೆ: 03 ವರ್ಷಗಳು
  • SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷಗಳು

ಅರ್ಜಿ ಶುಲ್ಕ:

  • SC/ST/Cat-I/PwBD ಅಭ್ಯರ್ಥಿಗಳಿಗೆ: ರೂ.100/-
  • ಇತರೆ ಎಲ್ಲಾ ಅಭ್ಯರ್ಥಿಗಳಿಗೆ: ರೂ.200/-

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.19900 ರಿಂದ 63200/- ರೂ.ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-07-2023
  • ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 20-07-2023

ಇದನ್ನೂ ಓದಿ: KSRLPS Recruitment 2023: ಸರ್ಕಾರಿ ಹುದ್ದೆಗಳ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: karnatakajudiciary.kar.nic.in

ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:27 pm, Wed, 21 June 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?