Karnataka High Court Recruitment 2023: ಕರ್ನಾಟಕ ಹೈಕೋರ್ಟ್ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 13 ಲಾ ಕ್ಲರ್ಕ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಹೈ ಕೋರ್ಟ್ನ ಅಧಿಕೃತ ವೆಬ್ಸೈಟ್ kar.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಲಾ ಕ್ಲರ್ಕ್ ಅ್ಯಂಡ್ ರಿಸರ್ಚ್ ಅಸಿಸ್ಟೆಂಟ್- 13 ಹುದ್ದೆಗಳು
ಅರ್ಹತಾ ಮಾನದಂಡಗಳು:
ವಯೋಮಿತಿ:
ಈ ಹುದ್ದೆಗಳಿಗೆ 30 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಇದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಶೈಕ್ಷಣಿಕ ದಾಖಲೆಗಳ ಪರಿಶೀಲನೆ ಮತ್ತು ಪ್ರಮಾಣೀಕರಣ ಹಾಗೂ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 25, 2023
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 25 ಸಾವಿರ ರೂ. ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.