Karnataka High Court Recruitment 2023: ಕರ್ನಾಟಕ ಹೈಕೋರ್ಟ್ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Karnataka High Court Recruitment 2023: ಕರ್ನಾಟಕ ಹೈಕೋರ್ಟ್ನ ಚಾಲಕ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಪಾಸಾಗಿರುವ ಅಭ್ಯರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಬಹುದು.
Karnataka High Court Recruitment 2023: ಕರ್ನಾಟಕ ಹೈಕೋರ್ಟ್ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 39 ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್ನ ಅಧಿಕೃತ ವೆಬ್ಸೈಟ್ karnatakajudiciary.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಸಂಸ್ಥೆಯ ಹೆಸರು : ಹೈ ಕೋರ್ಟ್ ಆಫ್ ಕರ್ನಾಟಕ ( ಕರ್ನಾಟಕ ಹೈಕೋರ್ಟ್ )
- ಹುದ್ದೆಗಳ ಸಂಖ್ಯೆ: 39
- ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
- ಹುದ್ದೆಯ ಹೆಸರು: ಚಾಲಕ
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ SSLC ಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ರಿಂದ 35 ವರ್ಷಗಳ ಒಳಗಿರಬೇಕು. ಇನ್ನು SC/ST/Cat-I ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ:
- SC/ST/Cat-I ಅಭ್ಯರ್ಥಿಗಳಿಗೆ- ರೂ.250/-
- ಸಾಮಾನ್ಯ/OBC ಅಭ್ಯರ್ಥಿಗಳಿಗೆ- ರೂ.500/-
ಆಯ್ಕೆ ಪ್ರಕ್ರಿಯೆ:
ದಾಖಲೆ ಪರಿಶೀಲನೆ ಮತ್ತು ಚಾಲನಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳಿಗೆ ಮಾಸಿಕ 25500 ರೂ. ರಿಂದ 81100 ರೂ.ವರೆಗೆ ವೇತನ ನೀಡಲಾಗುತ್ತದೆ.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂ- ಏಪ್ರಿಲ್ 6, 2023
ಕರ್ನಾಟಕ ಹೈಕೋರ್ಟ್ ಅಧಿಸೂಚನೆ ಪ್ರಮುಖ ಲಿಂಕ್‌ಗಳು:
- ಅಧಿಕೃತ ಅಧಿಸೂಚನೆ – ಚಾಲಕ (ಕಲ್ಯಾಣ ಕರ್ನಾಟಕ ಪ್ರದೇಶ):- ಇಲ್ಲಿ ಕ್ಲಿಕ್ ಮಾಡಿ
- ಅಧಿಕೃತ ಅಧಿಸೂಚನೆ – ಚಾಲಕ (ಉಳಿದ ಸಿಬ್ಬಂದಿ):- ಇಲ್ಲಿ ಕ್ಲಿಕ್ ಮಾಡಿ
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು – (ಕಲ್ಯಾಣ ಕರ್ನಾಟಕ ಪ್ರದೇಶ):- ಇಲ್ಲಿ ಕ್ಲಿಕ್ ಮಾಡಿ
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು – (ಉಳಿದ ಸಿಬ್ಬಂದಿ):- ಇಲ್ಲಿ ಕ್ಲಿಕ್ ಮಾಡಿ
- ಅಧಿಕೃತ ವೆಬ್ಸೈಟ್: karnatakajudiciary.kar.nic.in