Teachers Recruitment: 15,000 ಶಿಕ್ಷಕರ ನೇಮಕಾತಿ ತಾತ್ಕಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ
15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ ನಿರಾಸೆಯಾದಂತಾಗಿದೆ.
ಬೆಂಗಳೂರು: ಮೊನ್ನೇ ಅಷ್ಟೇ ಪ್ರಕಟಿಸಲಾಗಿದ್ದ 15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ (Teachers Recruitment) 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಕರ್ನಾಟಕ ಹೈಕೋರ್ಟ್ (Karnataka high court) ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ತಡೆಯಾಜ್ಞೆಯಿಂದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಇನ್ನಷ್ಟು ತಡವಾಗುವ ಸಾಧ್ಯತೆ ಇದೆ.
ಕರ್ನಾಟಕದ ವಿವಿಧ ಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗಾಗಿ ಸರ್ಕರ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿತ್ತು. ಆಯ್ಕೆಯಲ್ಲಿ ಕೆಲಗೊಂದಲಗಳು ಇರುವುದರಿಂದ ಕೆಲ ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗಿದ್ದರು. ಇಂದುಶ(ನ.30) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಮುಂದಿನ ಆದೇಶದವರೆಗೆ ಆಯ್ಕೆ ತಾತ್ಕಾಲಿಕ ಆಯ್ಕೆ ಪಟ್ಟಿಗೆ ನೀಡಿ ಆದೇಶ ಹೊರಡಿಸಿದೆ.
ಮೀಸಲಾತಿ ಸಂಬಂಧ ಹಲವು ಅಭ್ಯರ್ಥಿಗಳು ಒಬಿಸಿ ಮೀಸಲಾತಿಯಲ್ಲಿ ಪರಿಗಣಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಮುಂದಿನ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಒಟ್ಟು 15000 ಪಧವೀದರ ಹುದ್ದೆಗಳ ಪೈಕಿ 13363 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. 10 ತೃತೀಯ ಲಿಂಗಿಗಳ ಪೈಕಿ, 3 ತೃತೀಯ ಲಿಂಗಿಗಳು ಆಯ್ಕೆಯಾಗಿರುವುದು ವಿಶೇಷವಾಗಿತ್ತು ಇನ್ನು 34 ಇಂಜಿನಿಯರಿಂಗ್ ಅಭ್ಯರ್ಥಿಗಳ ಪೈಕಿ 19 ಜನರು ಆಯ್ಕೆಯಾಗಿದ್ದರು.
ಇದನ್ನೂ ಓದಿ: TET: ಶಿಕ್ಷಕರ ಅರ್ಹತಾ ಪರೀಕ್ಷೆಯ ಫೈನಲ್ ಕೀ ಉತ್ತರ ಪ್ರಕಟ, ಇಲ್ಲಿದೆ ಪತ್ರಿಕೆ 1, 2ರ ಕೀ ಉತ್ತರಗಳು
ಶಿಕ್ಷಣ ಇಲಾಖೆಯು 2022ರ ಮಾರ್ಚ್/ ಏಪ್ರಿಲ್ ತಿಂಗಳಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕಾಗಿ ಅರ್ಜಿ ಆಹ್ವಾನಿಸಿತ್ತು. ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ಸಹ ನಡೆಸಿತ್ತು. ಪತ್ರಿಕೆ ಒಂದಕ್ಕೆ 68,873 ಅಭ್ಯರ್ಥಿಗಳು ಮತ್ತು ಪತ್ರಿಕೆ 2ಕ್ಕೆ 10,571 ಅಭ್ಯರ್ಥಿಗಳು ಪರೀಕ್ಷೆ ಎದುರಿಸಿದ್ದರು.
ಯಾವ ವಿಷಯಗಳಲ್ಲಿ ಎಷ್ಟು ಅಭ್ಯರ್ಥಿಗಳು ಆಯ್ಕೆ?
* ಹೈ-ಕ ಭಾಗದಲ್ಲಿ 5000 ಹುದ್ದೆ ಮೀಸಲು ಪೈಕಿ 4187 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
* ಇಂಗ್ಲಿಷ್ ಭಾಷೆಯಲ್ಲಿ 1807 ಹುದ್ದೆ ಪೈಕಿ 1768 ಅಭ್ಯರ್ಥಿಗಳು ಆಯ್ಕೆ.
* ಗಣಿತ, ವಿಜ್ಞಾನ ಭಾಷೆಯಲ್ಲಿ 6500 ಪೈಕಿ 5450 ಅಭ್ಯರ್ಥಿಗಳು ಆಯ್ಕೆ.
* ಸಮಾಜ ವಿಜ್ಞಾನ ಭಾಷೆಯಲ್ಲಿ 4693 ಪೈಕಿ 4521 ಅಭ್ಯರ್ಥಿಗಳು ಆಯ್ಕೆ.
* ಜೀವವಿಜ್ಞಾನ ಭಾಷೆಯಲ್ಲಿ 2000 ಹುದ್ದೆ ಪೈಕಿ 1694 ಅಭ್ಯರ್ಥಿಗಳು ಆಯ್ಕೆ
Published On - 9:30 pm, Wed, 30 November 22