ಕರ್ನಾಟಕ ಲೋಕಾಯುಕ್ತದಲ್ಲಿ 30 ಕ್ಲರ್ಕ್, ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

Karnataka Lokayukta Recruitment 2024 : ಕರ್ನಾಟಕದ ಲೋಕಾಯುಕ್ತ ಇಲಾಖೆಯು ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ದಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಪಿಯುಸಿ ಪಾಸಾಗಿದ್ದು ಉದ್ಯೋಗ ಹುಡುಕುತ್ತಿರುವ ಆಸಕ್ತ ಅಭ್ಯರ್ಥಿಗಳು ಕರ್ನಾಟಕದ ಲೋಕಯುಕ್ತ ಇಲಾಖೆಯ ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅದಕ್ಕೂ ಮುನ್ನ ಖಾಲಿಯಿರುವ ಹುದ್ದೆಗಳ ವಿವರ, ಅರ್ಹತಾ ಮಾನದಂಡ, ಅರ್ಜಿ ಶುಲ್ಕ, ವೇತನ ಶ್ರೇಣಿ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕ ಲೋಕಾಯುಕ್ತದಲ್ಲಿ 30 ಕ್ಲರ್ಕ್, ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 07, 2024 | 1:48 PM

ಕರ್ನಾಟಕದ ಲೋಕಾಯುಕ್ತ ಇಲಾಖೆಯು ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ದಲ್ಲಿ ಖಾಲಿ ಇರುವ ಕರ್ಕ್‌-ಕಂ-ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಇದರಡಿಯಲ್ಲಿ ಪಿಯುಸಿ ಪಾಸ್ ಆದವರು ಈ ನವೆಂಬರ್ ತಿಂಗಳ 29 ರೊಳಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ lokayukta.karnataka.gov.in ಭೇಟಿ ನೀಡಿ ಈ ಹುದ್ದೆಯ ಕುರಿತಾದ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಿ

ಹುದ್ದೆಗಳ ವಿವರ

* ಹುದ್ದೆಯ ಹೆಸರು – ಕ್ಲರ್ಕ್​ ಕಮ್ ಟೈಪಿಸ್ಟ್​

* ಒಟ್ಟು ಹುದ್ದೆಗಳು- 30 (ಕಲ್ಯಾಣ ಕರ್ನಾಟಕಕ್ಕೆ 14 ಹುದ್ದೆಗಳನ್ನು ಮೀಸಲಿರಿಸಲಾಗಿದೆ).

* ವೇತನ ಶ್ರೇಣಿ – ರೂ 34,100 ರಿಂದ ರೂ 67.600

ಶೈಕ್ಷಣಿಕೆ ವಿದ್ಯಾರ್ಹತೆ

* ಅರ್ಜಿ ಸಲ್ಲಿಸುವ ಅಭ್ಯರ್ಥಿಯೂ ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಪಾಸ್ ಆಗಿರಬೇಕು.

* ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 207 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ

ವಯೋಮಿತಿ

* ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ ವಯೋಮಿತಿ 38 ವರ್ಷವಾಗಿದೆ. ಆದರೆ ಪ್ರವರ್ಗ 2ಎ , 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ, ಪ. ಪಂ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಶುಲ್ಕ ಹಾಗೂ ಆಯ್ಕೆ ಪ್ರಕ್ರಿಯೆ

* ಸಾಮಾನ್ಯ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 250 ರೂ ಅರ್ಜಿ ಶುಲ್ಕವಿರುತ್ತದೆ.

* ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

* ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ, ಮೀಸಲಾತಿ ಆಧಾರದಲ್ಲಿ 1:10 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಪ್ರಕಟಿಸಲಾಗುತ್ತದೆ.

* ಈ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯಿರುತ್ತದೆ. ಆದರೆ ಈ ಪರೀಕ್ಷೆಯಲ್ಲಿ ಕನಿಷ್ಠ ಶೇ 50 ರಷ್ಟು ಅಂಕಗಳನ್ನು ಕಡ್ಡಾಯವಾಗಿ ಪಡೆಯಲೇಬೇಕು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕ

* ಅರ್ಜಿ ಸಲ್ಲಿಸಲು ಕೊನೆ ದಿನಾಂಕ- 29 ನವೆಂಬರ್ 2024

* ಶುಲ್ಕ ಪಾವತಿಗೆ ಕೊನೆ ದಿನಾಂಕ- 30 ನವೆಂಬರ್ 2024

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಳ್ಳರ ಹಾವಳಿ‌ ತಡೆಯಲು ಮಹಿಳೆಯರ ರಾತ್ರಿ ಗಸ್ತು
ಕಳ್ಳರ ಹಾವಳಿ‌ ತಡೆಯಲು ಮಹಿಳೆಯರ ರಾತ್ರಿ ಗಸ್ತು
ರೆಡ್ ಕಾರ್ಪೆಟ್ ರೀ ಲಾಂಚ್​ಗೆ ಸ್ಟೈಲ್​ ಆಗಿ ಎಂಟ್ರಿ ಕೊಟ್ಟ ಪವಿತ್ರಾ ಗೌಡ
ರೆಡ್ ಕಾರ್ಪೆಟ್ ರೀ ಲಾಂಚ್​ಗೆ ಸ್ಟೈಲ್​ ಆಗಿ ಎಂಟ್ರಿ ಕೊಟ್ಟ ಪವಿತ್ರಾ ಗೌಡ
ವಿದ್ಯಾರ್ಥಿಗಳಿಗೆ ಅನುಕೂಲವಾಗದ ನಮ್ಮ ಮೆಟ್ರೊ ಟಿಕೆಟ್ ದರ ಪರಿಷ್ಕರಣೆ
ವಿದ್ಯಾರ್ಥಿಗಳಿಗೆ ಅನುಕೂಲವಾಗದ ನಮ್ಮ ಮೆಟ್ರೊ ಟಿಕೆಟ್ ದರ ಪರಿಷ್ಕರಣೆ
ಮದುವೆಗೆ ಟೆಂಪಲ್-ಗೋಲ್ಡ್​ ಥೀಮ್; ಹೀಗಿರುತ್ತೆ ಡಾಲಿ ಧನಂಜಯ್ ವಿವಾಹ
ಮದುವೆಗೆ ಟೆಂಪಲ್-ಗೋಲ್ಡ್​ ಥೀಮ್; ಹೀಗಿರುತ್ತೆ ಡಾಲಿ ಧನಂಜಯ್ ವಿವಾಹ
ಚಾಲಕ ಇಳಿದು ಹೋಗುತ್ತಿದ್ದಂತೆ ಆತನ ಹಿಂದೆಯೇ ಚಲಿಸಿದ ಡೀಸೆಲ್ ಟ್ಯಾಂಕರ್!
ಚಾಲಕ ಇಳಿದು ಹೋಗುತ್ತಿದ್ದಂತೆ ಆತನ ಹಿಂದೆಯೇ ಚಲಿಸಿದ ಡೀಸೆಲ್ ಟ್ಯಾಂಕರ್!
ಕೆಆರ್ ಮಾರುಕಟ್ಟೆ ಫ್ಲೈಓವರ್​ನಲ್ಲಿ ಬಿಎಂಟಿಸಿ ಬಸ್​, ಬೈಕ್ ಡಿಕ್ಕಿ
ಕೆಆರ್ ಮಾರುಕಟ್ಟೆ ಫ್ಲೈಓವರ್​ನಲ್ಲಿ ಬಿಎಂಟಿಸಿ ಬಸ್​, ಬೈಕ್ ಡಿಕ್ಕಿ
ಮನೆಯಲ್ಲಿ ಡೈನಿಂಗ್ ಟೇಬಲ್ ಎಲ್ಲಿದ್ದರೆ ಉತ್ತಮ ತಿಳಿಯಲು ಈ ವಿಡಿಯೋ ನೋಡಿ
ಮನೆಯಲ್ಲಿ ಡೈನಿಂಗ್ ಟೇಬಲ್ ಎಲ್ಲಿದ್ದರೆ ಉತ್ತಮ ತಿಳಿಯಲು ಈ ವಿಡಿಯೋ ನೋಡಿ
ಈ ರಾಶಿಯವರು ಇಂದು ಶಕ್ತಿಯ ಆರಾಧನೆ ಮಾಡಿದ್ರೆ ಶುಭ ಸುದ್ದಿ ಕೇಳುವರು
ಈ ರಾಶಿಯವರು ಇಂದು ಶಕ್ತಿಯ ಆರಾಧನೆ ಮಾಡಿದ್ರೆ ಶುಭ ಸುದ್ದಿ ಕೇಳುವರು
ಕೇರಳದ ದೇವಾಲಯದ ಉತ್ಸವದಲ್ಲಿ ರೊಚ್ಚಿಗೆದ್ದ ಆನೆಗಳು; ಮೂವರು ಸಾವು
ಕೇರಳದ ದೇವಾಲಯದ ಉತ್ಸವದಲ್ಲಿ ರೊಚ್ಚಿಗೆದ್ದ ಆನೆಗಳು; ಮೂವರು ಸಾವು
ಪ್ರಧಾನಿ ಮೋದಿ ಜೊತೆಗಿನ ಸಭೆಗೆ ಬ್ಲೇರ್​ ಹೌಸ್​ಗೆ ಆಗಮಿಸಿದ ಎಲಾನ್ ಮಸ್ಕ್
ಪ್ರಧಾನಿ ಮೋದಿ ಜೊತೆಗಿನ ಸಭೆಗೆ ಬ್ಲೇರ್​ ಹೌಸ್​ಗೆ ಆಗಮಿಸಿದ ಎಲಾನ್ ಮಸ್ಕ್