Karnataka Post Office Recruitment 2023: ಭಾರತೀಯ ಅಂಚೆ ಇಲಾಖೆಯು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಕರ್ನಾಟಕದಲ್ಲಿರುವ ಒಟ್ಟು 3036 ಗ್ರಾಮೀಣ್ ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ indiapostgdsonline.cept.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ:
ಈ ಹುದ್ದೆಗಳಿಗೆ 18 ರಿಂದ 40 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ವಯೋಮಿತಿಯನ್ನು ಫೆಬ್ರವರಿ 16, 2023ಕ್ಕೆ ಅನುಗುಣವಾಗಿ ಲೆಕ್ಕ ಹಾಕಲಾಗುತ್ತದೆ.
ಹಾಗೆಯೇ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, SC/ ST ಅಭ್ಯರ್ಥಿಗಳಿಗೆ 5 ವರ್ಷಗಳು, PWD ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
Also Read: SJVN Limited Recruitment 2023: ಜಲ ವಿದ್ಯುತ್ ನಿಗಮದ ನೇಮಕಾತಿ: ತಿಂಗಳ ಸಂಬಳ 45 ಸಾವಿರ ರೂ.
ಅರ್ಜಿ ಶುಲ್ಕ:
ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಿಲ್ಲ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಶಾರ್ಟ್ ಲೀಸ್ಟ್ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಕರೆದು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ:
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 16, 2023.