
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ಅಧಿಸೂಚನೆಯ ಮೂಲಕ ಅತಿಥಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕಕ್ಕಿಂತ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
2025-26 ನೇ ಸಾಲಿನ ಮೊದಲ ಹಂತದಲ್ಲಿ, ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 9499 ವಿಷಯ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆಯ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ವರ್ಷದ ಮಾರ್ಚ್ 2026 ರ ಅಂತ್ಯದವರೆಗೆ, ಯಾವುದು ಮೊದಲೋ ಅದು, ಈ ಕೆಳಗಿನ ಷರತ್ತುಗಳಿಗೆ ಒಳಪಟ್ಟು ಅತಿಥಿ ಶಿಕ್ಷಕರನ್ನು ಗೌರವಧನದ ಆಧಾರದ ಮೇಲೆ ತಾತ್ಕಾಲಿಕ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಇಲ್ಲಿ ಅನುಮತಿ ನೀಡಲಾಗಿದೆ.
ಇದನ್ನೂ ಓದಿ: ವಿದೇಶದಲ್ಲಿ MBBS ಓದುವ ಭಾರತೀಯರ ಗಮನಕ್ಕೆ, ಈ ವಿಷ್ಯ ಗೊತ್ತಿಲ್ಲದಿದ್ದರೆ ಮೋಸ ಹೋಗುವುದು ಗ್ಯಾರಂಟಿ
ಪ್ರೌಢಶಾಲೆಗಳಿಗೆ ಈ ಕೆಳಗಿನ ನಮೂನೆಯಲ್ಲಿ ನೇಮಕಗೊಂಡ ತಾಲ್ಲೂಕು ಪಂಚಾಯತ್‌ವಾರು ಅತಿಥಿ ಶಿಕ್ಷಕರ ಹುದ್ದೆಗಳ ವಿವರಗಳನ್ನು, ಕ್ರೋಢೀಕೃತ, ಪ್ರಮಾಣೀಕೃತ (ಪಿಡಿಎಫ್ ಸ್ವರೂಪದಲ್ಲಿ), ಸ್ಕ್ಯಾನ್ ಪ್ರತಿಯನ್ನು ಆಯುಕ್ತರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಕೆ.ಆರ್. ವೃತ್ತ, ಬೆಂಗಳೂರು-01 ಇಲ್ಲಿಗೆ ಜೂನ್-20 ರೊಳಗೆ ಇಮೇಲ್ ವಿಳಾಸ: est4cpibng@gmail.com ಮೂಲಕ ಸಲ್ಲಿಸಬೇಕು.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು: schooleducation.karnataka.gov.in
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:53 pm, Sun, 1 June 25