AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Revenue Dept Recruitment 2025: ಕರ್ನಾಟಕ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಪಿಯುಸಿ, ಪದವೀಧರರು ಅರ್ಜಿ ಸಲ್ಲಿಸಿ

ಕರ್ನಾಟಕ ಕಂದಾಯ ಇಲಾಖೆಯು 500 ಗ್ರಾಮ ಲೆಕ್ಕಿಗ, ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ಕಿರು ಅಧಿಸೂಚನೆ ಹೊರಡಿಸಿದೆ. 10ನೇ ತರಗತಿ, 12ನೇ ತರಗತಿ ಅಥವಾ ಪದವಿ ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಬಯಸುವವರು ಕಂದಾಯ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Revenue Dept Recruitment 2025: ಕರ್ನಾಟಕ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಪಿಯುಸಿ, ಪದವೀಧರರು ಅರ್ಜಿ ಸಲ್ಲಿಸಿ
ಕರ್ನಾಟಕ ಕಂದಾಯ ಇಲಾಖೆ
ಅಕ್ಷತಾ ವರ್ಕಾಡಿ
|

Updated on:Oct 15, 2025 | 4:09 PM

Share

ಕರ್ನಾಟಕ ಕಂದಾಯ ಇಲಾಖೆ ಅಧಿಕೃತ ಕಿರು ಅಧಿಸೂಚನೆಯ ಮೂಲಕ 500 ಗ್ರಾಮ ಲೆಕ್ಕಿಗ(Village Accountant) ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಕರ್ನಾಟಕ ಕಂದಾಯ ಇಲಾಖೆಯ ವೆಬ್​ಸೈಟ್​​ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ವಿವರ:

  • ಹುದ್ದೆಗಳ ಸಂಖ್ಯೆ: 500
  • ಉದ್ಯೋಗ ಸ್ಥಳ: ಕರ್ನಾಟಕ
  • ಹುದ್ದೆಯ ಹೆಸರು: ಗ್ರಾಮ ಲೆಕ್ಕಿಗ, ಪ್ರಥಮ ದರ್ಜೆ ಸಹಾಯಕ (FDA), ದ್ವಿತೀಯ ದರ್ಜೆ ಸಹಾಯಕ (SDA)
  • ಸಂಬಳ: ತಿಂಗಳಿಗೆ 34100-83700 ರೂ.

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ, ಪದವಿ , ಬಿ.ಕಾಂ. ಪೂರ್ಣಗೊಳಿಸಿರಬೇಕು .

ವಯೋಮಿತಿ:

ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ ವಯಸ್ಸಿನವರಾಗಿರಬೇಕು. ಆದರೆ 2A, 2B, 3A, 3B ಅಭ್ಯರ್ಥಿಗಳಿಗೆ 03 ವರ್ಷ, SC/ST ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಇದನ್ನೂ ಓದಿ: ಸರ್ಕಾರಿ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಡಿಗ್ರಿ ಪಾಸಾಗಿದ್ರೆ ಸಾಕು

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ (ಕಡ್ಡಾಯ ಕನ್ನಡ ಪತ್ರಿಕೆಯ ಹೊರತಾಗಿ, ತಲಾ 100 ಅಂಕಗಳ 2 ಪತ್ರಿಕೆಗಳು ಇರುತ್ತವೆ ಮತ್ತು ಋಣಾತ್ಮಕ ಅಂಕಗಳು ಇರುತ್ತವೆ.)ಜೊತೆಗೆ ದಾಖಲೆಗಳ ಪರಿಶೀಲನೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.(Next-VAO-Recruitment)
  • ಕರ್ನಾಟಕ ಕಂದಾಯ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯಿಸಿದರೆ) ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ Apply ಬಟನ್ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Wed, 15 October 25