Revenue Dept Recruitment: ಕಂದಾಯ ಇಲಾಖೆಯಲ್ಲಿ ನೇಮಕಾತಿ; ಬೆಂಗಳೂರಿನಲ್ಲಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ
ಕರ್ನಾಟಕ ಕಂದಾಯ ಇಲಾಖೆಯು ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಮೂರು ಖಾಲಿ ಹುದ್ದೆಗಳಿದ್ದು, ಮಾಸಿಕ 45,000-55,000 ರೂ. ಸಂಬಳ ದೊರೆಯಲಿದೆ. ಆಸಕ್ತರು ನವೆಂಬರ್ 9ರ ಮೊದಲು ಅಧಿಕೃತ ಅಧಿಸೂಚನೆ ಓದಿ, ಅರ್ಜಿ ನಮೂನೆ ಭರ್ತಿ ಮಾಡಿ, ರಿಜಿಸ್ಟರ್ ಪೋಸ್ಟ್ ಮೂಲಕ ಕಳುಹಿಸಬೇಕು.

ಕಂದಾಯ ಇಲಾಖೆಯಲ್ಲಿ ನೇಮಕಾತಿ
ಕರ್ನಾಟಕ ಕಂದಾಯ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನಕ್ಕಾಗಿ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ನವೆಂಬರ್ 09ರ ಮೊದಲಯ ಮೊದಲು ಅರ್ಜಿ ಸಲ್ಲಿಸಬೇಕು.
ಖಾಲಿ ಹುದ್ದೆಗಳ ಅಧಿಸೂಚನೆ:
- ಹುದ್ದೆಗಳ ಸಂಖ್ಯೆ: 03
- ಉದ್ಯೋಗ ಸ್ಥಳ: ಬೆಂಗಳೂರು
- ಹುದ್ದೆಯ ಹೆಸರು: ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ
- ಸಂಬಳ: ತಿಂಗಳಿಗೆ 45000-55000ರೂ.
ಇದನ್ನೂ ಓದಿ: ರೈಲ್ವೆಯಲ್ಲಿ 8500 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು
ಅರ್ಜಿ ಸಲ್ಲಿಸಲು ಕ್ರಮಗಳು:
- ಮೊದಲನೆಯದಾಗಿ ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
- ಮೇಲಿನ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
- ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಕೊನೆಗೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ ಕಳುಹಿಸಿ.
- ವಿಳಾಸ: ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಕಚೇರಿ, ಪೋಡಿಯಂ ಬ್ಲಾಕ್, 03 ನೇ ಮತ್ತು 04 ನೇ ಮಹಡಿ, ವಿಶ್ವೇಶ್ವರಯ್ಯ ಟವರ್, ಬೆಂಗಳೂರು-560001
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:16 pm, Thu, 30 October 25




