ಜಿಲ್ಲಾವಾರು ಒಟ್ಟು 27 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ತೀರ್ಮಾನ

|

Updated on: May 25, 2023 | 7:33 PM

ಕರ್ನಾಟಕದಲ್ಲಿ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಇನ್ನೂ ಮುಗಿಯದ ಹಿನ್ನೆಲೆ ಜಿಲ್ಲಾವಾರು ಒಟ್ಟು 27 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ.

ಜಿಲ್ಲಾವಾರು ಒಟ್ಟು 27 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ತೀರ್ಮಾನ
ಕರ್ನಾಟಕದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ (ಸಾಂದರ್ಭಿಕ ಚಿತ್ರ)
Follow us on

ಬೆಂಗಳೂರು: ಕರ್ನಾಟಕದಲ್ಲಿ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ (Graduate Teachers Recruitment) ಇನ್ನೂ ಮುಗಿಯದ ಹಿನ್ನೆಲೆ ತಾತ್ಕಾಲಿಕವಾಗಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಸದ್ಯ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಅತಿಥಿ ಶಿಕ್ಷಕರ (Guest Teachers) ನೇಮಕಕ್ಕೆ ತೀರ್ಮಾನಿಸಲಾಗಿದೆ. ಅದರಂತೆ ಜಿಲ್ಲಾವಾರು ಒಟ್ಟು 27 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಲಿದ್ದಾರೆ.

2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ. 15 ಸಾವಿರ ಪದವಿದರ ಶಿಕ್ಷಕರ ನೇಮಕಾತಿ ಕೊನೆಯ ಹಂತದ ಪ್ರಕ್ರಿಯೇ ಇದೆ. ಇದು ಇನ್ನೂ ಸಂಪೂರ್ಣವಾಗ ಹಿನ್ನೆಲೆ ಒಟ್ಟು 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಇಲಾಖೆ ಮುಂದಾಗಿದೆ.

ಇದನ್ನೂ ಓದಿ: Business Ideas: ಮಹಿಳೆಯರೇ! ಮನೆಯಲ್ಲೇ ಇದ್ದುಕೊಂಡು ತಿಂಗಳಿಗೆ 1 ಲಕ್ಷ ರೂಪಾಯಿ ಆದಾಯ ಗಳಿಸುವ ಬಿಸಿನೆಸ್​ ಅವಕಾಶ ನಿಮಗಾಗಿ ಇಲ್ಲಿದೆ ನೋಡಿ

15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿ -2022ರ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಮಾರ್ಚ್ 8ರಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ 1:1 ಆಯ್ಕೆ ಪಟ್ಟಿಯು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿತ್ತು.

ಇದಕ್ಕೂ ಮುನ್ನ ಬಿಡುಗಡೆಯಾಗಿದ್ದ ತಾತ್ಕಾಲಿಕ ಪಟ್ಟಿಯಲ್ಲಿ ಇತರೆ ಹಿಂದುಳಿದ ವರ್ಗಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಂಬಂಧ ಇಲಾಖೆಯ ನಿಯಮ ಗೊಂದಲಕ್ಕೆ ಕಾರಣವಾಗಿತ್ತು. ಹೀಗಾಗಿ ಒಂದಷ್ಟು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಪರಿಣಾಮ, ಜನವರಿ 30ರಂದು ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಆದೇಶ ಹೊರಡಿಸಲಾಗಿತ್ತು.

ಉದ್ಯೋಗ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ