Karnataka Govt Jobs 2022: ಕರ್ನಾಟಕ ಜಲಸಂಪನ್ಮೂಲ ಇಲಾಖೆಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Karnataka SDA Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಜಲಸಂಪನ್ಮೂಲ ಇಲಾಖೆಯ ಅಧಿಕೃತ ವೆಬ್‌ಸೈಟ್ waterresources.kar.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
Karnataka SDA Recruitment 2022: ಕರ್ನಾಟಕ ಜಲಸಂಪನ್ಮೂಲ ಇಲಾಖೆಯು ಮಾಧ್ಯಮಿಕ ವಿಭಾಗದ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 155 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಜಲಸಂಪನ್ಮೂಲ ಇಲಾಖೆಯ ಅಧಿಕೃತ ವೆಬ್‌ಸೈಟ್ waterresources.kar.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಒಟ್ಟು ಹುದ್ದೆಗಳ ಸಂಖ್ಯೆ-155
- ಹುದ್ದೆಗಳ ಹೆಸರು- ದ್ವಿತೀಯ ದರ್ಜೆ ಸಹಾಯಕರು
ವಿದ್ಯಾರ್ಹತೆ:
- -ಕರ್ನಾಟಕ ಸ್ನಾತಕೋತ್ತರ ಶಿಕ್ಷಣ ಇಲಾಖೆ ನಡೆಸುವ ಪದವಿ ಪೂರ್ವ ಪರೀಕ್ಷೆಯಲ್ಲಿ (PUC) ಪಾಸ್ ಆಗಿರಬೇಕು.
- -CBSC ಮತ್ತು ISC ಬೋರ್ಡ್ ನಡೆಸುವ 10 + 2 ತರಗತಿ ಪರೀಕ್ಷೆ ಪಾಸಾದವರು ಅರ್ಜಿ ಸಲ್ಲಿಸಬಹುದು.
- – ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ನಡೆಸುವ ಹೈಯರ್ ಸೆಕೆಂಡರಿ ಕೋರ್ಸ್/ HSC ಪಾಸಾದವರು ಸಹ ಅರ್ಜಿ ಸಲ್ಲಿಸಬಹುದಾಗಿದೆ.
- – ಮೂರು ವರ್ಷದ ಡಿಪ್ಲೊಮಾ ಅಥವಾ ಎರಡು ವರ್ಷದ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೊಮಾ (ಜೆಒಸಿ ಜೆಒಡಿಸಿ/ಜೆಎಲ್‌ಡಿಸಿ) ಮಾಡಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು – 18 ವರ್ಷಗಳು
- ಗರಿಷ್ಠ ವಯಸ್ಸು 40 ವರ್ಷ ಮೀರಬಾರದು.
ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21 ಸಾವಿರದಿಂದ 42 ಸಾವಿರದವರೆಗೆ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 10, 2022
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.