Jobs: ಕ್ರೀಡಾ ತರಬೇತುದಾರರ ಹುದ್ದೆ ಭರ್ತಿ, ಸರ್ಕಾರಿ ಇಲಾಖೆಗಳಲ್ಲಿ ಕ್ರೀಡಾಪಟುಗಳ ನೇಮಕಕ್ಕೆ ಕ್ರಮ: ಸಚಿವ ನಾರಾಯಣಗೌಡ
ಖಾಸಗಿಯವರ ಸಹಕಾರದಲ್ಲಿ 75 ಕ್ರೀಡಾಪಟುಗಳನ್ನು ದತ್ತು ತೆಗೆದುಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ಮಾಡಿದ್ದಾರೆ ಎಂದು ಸಹ ಅವರು ವಿವರಿಸಿದರು.
ಶಿವಮೊಗ್ಗ: ಕರ್ನಾಟಕದಲ್ಲಿ ಕ್ರೀಡಾ ತರಬೇತುದಾರರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಉತ್ತಮ ಸಾಧನೆಗೈದ ಕ್ರೀಡಾಪಟುಗಳನ್ನು ಪೊಲೀಸ್ ಇಲಾಖೆಯೂ ಸೇರಿ ಇತರೆ ಇಲಾಖೆಗಳಲ್ಲಿ ನೇಮಿಸಿಕೊಳ್ಳಲಾಗುವುದು ಎಂದು ಶಿವಮೊಗ್ಗದಲ್ಲಿ ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದರು.
ಸರ್ಕಾರಿ ಇಲಾಖೆಗಳಲ್ಲಿ ಹುದ್ದೆ ಭರ್ತಿ ವೇಳೆ ಶೇಕಡಾ 2ರಷ್ಟು ಕ್ರೀಡಾಪಟುಗಳಿಗೆ ಅವಕಾಶ ಒದಗಿಸುವಂತೆ ಡಿಪಿಎಆರ್ಗೆ ಪತ್ರ ಬರೆದು ಮನವಿ ಮಾಡಲಾಗಿದೆ. ಅಲ್ಲದೇ ಖಾಸಗಿಯವರ ಸಹಕಾರದಲ್ಲಿ 75 ಕ್ರೀಡಾಪಟುಗಳನ್ನು ದತ್ತು ತೆಗೆದುಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ಮಾಡಿದ್ದಾರೆ ಎಂದು ಸಹ ಅವರು ವಿವರಿಸಿದರು.
ಈಗಾಗಲೇ ಜಿಂದಾಲ್ ಸಂಸ್ಥೆ 30 ಕ್ರೀಡಾಪಟುಗಳನ್ನು ದತ್ತು ಪಡೆಯಲು ಆಸಕ್ತಿ ತೋರಿಸಿದೆ. 2024ರ ಪ್ಯಾರಿಸ್ ಪ್ಯಾರಾ ಒಲಿಂಪಿಕ್ಸ್ಗೆ ರಾಜ್ಯದಿಂದ ಹೆಚ್ಚಿನ ಕ್ರೀಡಾಪಟುಗಳು ಕಳುಹಿಸಿಕೊಡುತ್ತೇವೆ. ಮುಂದಿನ ವರ್ಷ ರಾಜ್ಯದಲ್ಲಿ ಖೇಲೋ ಇಂಡಿಯಾ ಕ್ರೀಡಾಕೂಟ ಆಯೋಜಿಸಲಾಗಿದ್ದು, ದೇಶದ ವಿವಿಧೆಡೆಯಿಂದ 6ರಿಂದ7 ಸಾವಿರ ಕ್ರೀಡಾಪಟು ಭಾಗಿಯಾಗಲಿದ್ದಾರೆ. ಶಿವಮೊಗ್ಗ, ಮಂಡ್ಯದಲ್ಲಿ ಖೇಲೋ ಇಂಡಿಯಾ ಯೋಜನೆಯಡಿ ತಲಾ 70ರಿಂದ 75 ಕೋಟಿ ವೆಚ್ಚದಲ್ಲಿ ವಿಶೇಷ ತರಬೇತಿ ಕೇಂದ್ರ ಆರಂಭಿಸಲಾಗುವುದು. ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ತರಬೇತಿ ಕೇಂದ್ರ ನಿರ್ಮಿಸಲಾಗುವುದು ಎಂದು ಶಿವಮೊಗ್ಗದಲ್ಲಿ ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಮಾಹಿತಿ ನೀಡಿದರು.
ಇದನ್ನೂ ಓದಿ:
Salaried Class: ವೇತನದಾರರ ಉದ್ಯೋಗ ನಷ್ಟದ ಚೇತರಿಕೆಯಲ್ಲಿ ತೀವ್ರ ಸ್ವರೂಪದ ನಿಧಾನ
Freshworks Employees: ಈ ಕಂಪೆನಿಗಾಗಿ ಭಾರತದಲ್ಲಿ ಉದ್ಯೋಗ ಮಾಡುವ 500ಕ್ಕೂ ಹೆಚ್ಚು ಮಂದಿ ಕೋಟ್ಯಧಿಪತಿಗಳು
(Karnataka Sports Minister Narayana Gowda says will fulfill sports coach posts soon)