ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ( KSCA) ಖಾಲಿ ಇರುವ ಕೆಲವು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ. ಚೀಫ್ ಎಕ್ಸಿಕ್ಯುಟಿವ್ ಅಧಿಕಾರಿ, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಪರ್ಸೆನಲ್ ಸೆಕ್ರೆಟರಿ ಮತ್ತು ಸೀನಿಯರ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಹಾಕಬಹುದು. ಆಸಕ್ತಿ ಇರುವವರು ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ (Karnatak Cricket) ಸಂಸ್ಥೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇಲ್ ಮಾಡಬಹುದು. ಅರ್ಜಿಯನ್ನು ಸಲ್ಲಿಸಲು ಜನವರಿ 12 2022 ಕೊನೇಯ ದಿನವಾಗಿದೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ ಮತ್ತು ಸಿಎ ಇಂಟರ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪಡೆದಿರಬೇಕು. ಅಭ್ಯರ್ಥಿಗಳು ಕನಿಷ್ಟ 25 ರಿಂದ 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನೇಮಕಾತಿಯ ಚೀಫ್ ಎಕ್ಸಿಕ್ಯುಟಿವ್ ಅಧಿಕಾರಿ, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಪರ್ಸೆನಲ್ ಸೆಕ್ರೆಟರಿ ಮತ್ತು ಸೀನಿಯರ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು. ಎಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://www.ksca.cricket/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ hrdksca.co.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 12,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.
ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ: ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ಸಂಸ್ಥೆಯಲ್ಲಿ ಒಟ್ಟು ನಾಲ್ಕು ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 15 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಾವಕಾಶ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 71 ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.
BHEL Recruitment 2022: ಬಿಎಚ್ಇಎಲ್ನಲ್ಲಿ ಉದ್ಯೋಗಾವಕಾಶ: 36 ಹುದ್ದೆಗಳಿಗೆ ಅರ್ಜಿ ಆಹ್ವಾನ