ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.

KSSCL Recruitment 2022: ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್​ karnataka.gov.in/kea ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಅಧಿಸೂಚನೆಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
ksscl recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 20, 2022 | 6:58 PM

KSSCL Recruitment 2022: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ), ಹಿರಿಯ ಸಹಾಯಕರು, ಕಿರಿಯ ಸಹಾಯಕರು ಮತ್ತು ಬೀಜ ಸಹಾಯಕರು ಹುದ್ದೆಗಳ ಭರ್ತಿ ನಡೆಯಲಿದೆ. ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್​ karnataka.gov.in/kea ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಅಧಿಸೂಚನೆಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

  • ಹುದ್ದೆಗಳ ಹೆಸರು ಮತ್ತು ಸಂಖ್ಯೆ:
  • ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ): 16 ಹುದ್ದೆಗಳು
  • ಹಿರಿಯ ಸಹಾಯಕರು: 1 ಹುದ್ದೆಗಳು
  • ಕಿರಿಯ ಸಹಾಯಕರು: 9 ಹುದ್ದೆಗಳು
  • ಬೀಜ ಸಹಾಯಕರು: 6 ಹುದ್ದೆಗಳು
  • ವಿದ್ಯಾರ್ಹತೆ: ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ)- ಬಿಎಸ್ಸಿಯಲ್ಲಿ ಜೊತೆಗೆ ಕೃಷಿ ಪದವಿ ಮಾಡಿರಬೇಕು.
  • ಹಿರಿಯ ಸಹಾಯಕರು- ಬಿಕಾಂ ಅಥವಾ ಬಿಬಿಎಂ ಪದವಿ ಮಾಡಿರಬೇಕು. ಜೊತೆಗೆ ಟ್ಯಾಲಿ ಪ್ರಮಾಣ ಪತ್ರವನ್ನು ಹೊಂದಿರಬೇಕು.
  • ಕಿರಿಯ ಸಹಾಯಕರು- ಬಿಕಾಂ ಅಥವಾ ಬಿಬಿಎಂ ಪದವಿ ಹೊಂದಿರಬೇಕು. ಜೊತೆಗೆ ಟ್ಯಾಲಿ ಪ್ರಮಾಣ ಪತ್ರವನ್ನು ಹೊಂದಿರಬೇಕಾಗುತ್ತದೆ.
  • ಬೀಜ ಸಹಾಯಕರು- ಕೃಷಿ ವಿಷಯದಲ್ಲಿ 2 ವರ್ಷದ ಡಿಪ್ಲೊಮಾ ಮಾಡಿರಬೇಕು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 750 ರೂ. ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 500 ರೂ. ನಿಗದಿಪಡಿಸಲಾಗಿದೆ. ಹಾಗೆಯೇ ಮಾಜಿ ಸೈನಿಕ ಅಭ್ಯರ್ಥಿಗಳಿಗೆ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 / ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 35 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ. ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಬಳಿಕ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.

  • ವೇತನ ಶ್ರೇಣಿ:
  •  ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ)- 40900 ರಿಂದ 78200 ರೂ.
  • ಹಿರಿಯ ಸಹಾಯಕರು- 27650 ರಿಂದ 52650 ರೂ.
  • ಕಿರಿಯ ಸಹಾಯಕರು- 21400 ರಿಂದ 42000 ರೂ.
  • ಕಿರಿಯ ಸಹಾಯಕರು- 21400 ರಿಂದ 42000 ರೂ.
  • ಬೀಜ ಸಹಾಯಕರು- 21400 ರಿಂದ 42000 ರೂ.

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆ ದಿನಾಂಕ- ಜುಲೈ 20, 2022 ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ- ಜುಲೈ 25, 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ