
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯ ಮೂಲಕ ಉಪಕುಲಪತಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಧಾರವಾಡ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 01ರ ಒಳಗೆ ಅರ್ಜಿ ಸಲ್ಲಿಸಬೇಕು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ, 6ನೇ ಮಹಡಿ, ಗೇಟ್ ಸಂಖ್ಯೆ: 03, ಕೊಠಡಿ ಸಂಖ್ಯೆ 601 (ಆರ್ & ಐ ವಿಭಾಗ), ಎಂಎಸ್ ಬಿಲ್ಡಿಂಗ್, ಬೆಂಗಳೂರು-560001 ಇವರಿಗೆ ಕಳುಹಿಸಬೇಕಾಗುತ್ತದೆ. ಮಾರ್ಚ್ 01ರ ಒಳಗೆ ಪಿಡಿಎಫ್ ರೂಪದಲ್ಲಿ ಅರ್ಜಿಯ ಒಂದು ಸಾಫ್ಟ್ ಕಾಪಿಯನ್ನು uni2searchcommittee@gmail.com ಇಮೇಲ್ ಮಾಡಬೇಕು.
ಇದನ್ನೂ ಓದಿ: ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣಾವಕಾಶ; ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನಲ್ಲಿ ಅನೇಕ ಹುದ್ದೆಗಳಿಗೆ ನೇಮಕಾತಿ
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:20 pm, Fri, 31 January 25