AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Government Jobs: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಗಮನಕ್ಕೆ; KEAಯಿಂದ ನೇಮಕಾತಿ ಪರೀಕ್ಷೆಗಳ ದಿನಾಂಕ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರಾಜ್ಯದ ವಿವಿಧ ನಿಗಮ, ಮಂಡಳಿ, ವಿಶ್ವವಿದ್ಯಾಲಯಗಳ ಹುದ್ದೆಗಳ ನೇಮಕಾತಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ, ಬೆಂಗಳೂರು ಜಲಮಂಡಳಿ ಸೇರಿದಂತೆ ಹಲವು ಇಲಾಖೆಗಳ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಏಪ್ರಿಲ್ 26 ರಿಂದ ಮೇ 10ರವರೆಗೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದಕ್ಕೆ ಪ್ರತ್ಯೇಕ ದಿನಾಂಕಗಳಲ್ಲಿ ಪರೀಕ್ಷೆ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ KEA ವೆಬ್‌ಸೈಟ್ ಗಮನಿಸಬಹುದು.

Karnataka Government Jobs: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಗಮನಕ್ಕೆ; KEAಯಿಂದ ನೇಮಕಾತಿ ಪರೀಕ್ಷೆಗಳ ದಿನಾಂಕ ಪ್ರಕಟ
KEA ನೇಮಕಾತಿ ಪರೀಕ್ಷೆ
ಅಕ್ಷತಾ ವರ್ಕಾಡಿ
|

Updated on:Apr 10, 2026 | 12:14 PM

Share

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ರಾಜ್ಯದ ವಿವಿಧ ಪ್ರಮುಖ ನಿಗಮ, ಮಂಡಳಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS), ಬೆಂಗಳೂರು ಜಲಮಂಡಳಿ (BWSSB) ಮತ್ತು ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಈ ಪರೀಕ್ಷೆಗಳು ನಡೆಯಲಿವೆ. ಈ ಮೂಲಕ ಬಹುದಿನಗಳಿಂದ ಪರೀಕ್ಷೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಪ್ರಾಧಿಕಾರವು ಸ್ಪಷ್ಟನೆಯನ್ನು ನೀಡಿದೆ.

ಪರೀಕ್ಷಾ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಪ್ರಾಧಿಕಾರವು ದಿನಾಂಕಗಳನ್ನು ನಿಗದಿಪಡಿಸಿದ್ದು, ಹೈದರಾಬಾದ್ ಕರ್ನಾಟಕ ಹಾಗೂ ಉಳಿದ ಜಿಲ್ಲೆಗಳ ಅಭ್ಯರ್ಥಿಗಳಿಗೆ ಪ್ರತ್ಯೇಕ ದಿನಗಳಂದು ಪರೀಕ್ಷೆ ನಡೆಯಲಿದೆ. ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ನೀಡಿರುವ ಮಾಹಿತಿಯಂತೆ, ಮೂಲ ವೃಂದದ (RPC) ಹುದ್ದೆಗಳಿಗೆ ಏಪ್ರಿಲ್ 26 ಮತ್ತು ಮೇ 10ರಂದು ಪರೀಕ್ಷೆಗಳು ಜರುಗಲಿವೆ. ಅದೇ ರೀತಿ, ಕಲ್ಯಾಣ ಕರ್ನಾಟಕ ವೃಂದದ (HK) ಅಭ್ಯರ್ಥಿಗಳಿಗೆ ಏಪ್ರಿಲ್ 27 ಹಾಗೂ ಮೇ 9ರಂದು ಲಿಖಿತ ಪರೀಕ್ಷೆಗಳನ್ನು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಈ ನೇಮಕಾತಿ ಪರೀಕ್ಷೆಗಳಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಹೀಗೆ ವಿವಿಧ ಶ್ರೇಣಿಯ ಹುದ್ದೆಗಳು ಒಳಗೊಂಡಿವೆ. ಪರೀಕ್ಷೆಯ ಪಠ್ಯಕ್ರಮ, ಪರೀಕ್ಷಾ ಕೇಂದ್ರಗಳ ವಿವರ ಮತ್ತು ಪ್ರವೇಶ ಪತ್ರದ ಲಭ್ಯತೆಯ ಕುರಿತು ಅಭ್ಯರ್ಥಿಗಳು ನಿರಂತರವಾಗಿ ಕೆಇಎ ಅಧಿಕೃತ ವೆಬ್‌ಸೈಟ್(cetonline.karnataka.gov.in) ಗಮನಿಸಲು ಸೂಚಿಸಲಾಗಿದೆ. ಪರೀಕ್ಷಾ ದಿನಾಂಕಗಳು ಘೋಷಣೆಯಾಗಿರುವುದರಿಂದ ಅಭ್ಯರ್ಥಿಗಳು ತಮ್ಮ ಅಂತಿಮ ಹಂತದ ಸಿದ್ಧತೆಯನ್ನು ಚುರುಕುಗೊಳಿಸಲು ಇದು ಸಕಾಲವಾಗಿದೆ. ಹೆಚ್ಚಿನ ತಾಂತ್ರಿಕ ಮಾಹಿತಿ ಅಥವಾ ಬದಲಾವಣೆಗಳಿದ್ದಲ್ಲಿ ಪ್ರಾಧಿಕಾರವು ತನ್ನ ಜಾಲತಾಣದಲ್ಲಿ ಅಪ್‌ಡೇಟ್ ಮಾಡಲಿದೆ ಎಂದು ತಿಳಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Fri, 10 April 26

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ