ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಜೂನಿಯರ್ ಅಸಿಸ್ಟೆಂಟ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Dec 05, 2024 | 12:04 PM

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇದೀಗ ಒಟ್ಟಾರೆ 28 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಜೂನಿಯರ್ ಅಸಿಸ್ಟೆಂಟ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳು ಖಾಲಿಯಿದ್ದು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಡಿಸೆಂಬರ್ 4 ರಿಂದ ಜನವರಿ 3 2025 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಈ ಹುದ್ದೆಗಳ ವಿವರ, ವೇತನ ಶ್ರೇಣಿ, ಆಯ್ಕೆ ಪ್ರಕ್ರಿಯೆ ಹಾಗೂ ಅರ್ಹತಾ ಮಾನದಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಜೂನಿಯರ್ ಅಸಿಸ್ಟೆಂಟ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ
ಸಾಂದರ್ಭಿಕ ಚಿತ್ರ
Follow us on

ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣ ಅವಕಾಶವಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಆರಂಭವಾಗಿದೆ. ಜೂನಿಯರ್‌ ಅಸಿಸ್ಟೆಂಟ್‌, ಕಂಪ್ಯೂಟರ್‌ ಆಪರೇಟರ್‌ ಹುದ್ದೆಗಳು ಸೇರಿದಂತೆ ಒಟ್ಟು 28 ಹುದ್ದೆಗಳು ಖಾಲಿಯಿದ್ದು, ಆಸಕ್ತರು ಈ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚುವರಿ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ

* ಸೀನಿಯರ್ ಪ್ರೋಗ್ರಾಮರ್ – 2

* ಜೂನಿಯರ್ ಪ್ರೋಗ್ರಾಮರ್ – 2

* ಜೂನಿಯರ್ ಕನ್ಸೋಲ್ ಆಪರೇಟರ್ – 4

* ಕಂಪ್ಯೂಟರ್ ಆಪರೇಟರ್ – 4

* ಸಹಾಯಕರು – 3

* ಕಿರಿಯ ಸಹಾಯಕರು – 8

* ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು – 5

* ಒಟ್ಟು ಹುದ್ದೆಗಳು – 28

* ಉದ್ಯೋಗ ಸ್ಥಳ : ಕರ್ನಾಟಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಇರಬೇಕಾದ ವಿದ್ಯಾರ್ಹತೆ

* ಸೀನಿಯರ್ ಪ್ರೋಗ್ರಾಮರ್, ಜೂನಿಯರ್ ಪ್ರೋಗ್ರಾಮರ್, ಜೂನಿಯರ್ ಕನ್ಸೋಲ್ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೆಷನ್ ಸೈನ್ಸ್/ ಎಲೆಕ್ಟ್ರಾನಿಕ್ ಹಾಗೂ ಕಮ್ಯುನಿಕೇಷನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿರ ಬೇಕು.

* ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯೂ ಕಂಪ್ಯೂಟರ್ ಅಪ್ಲಿಕೇಷನ್ (ಬಿಸಿಎ) ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಎಸ್ಸಿ ಪದವಿ ಪೂರ್ಣಗೊಳಿಸಿರಬೇಕು.

* ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು ಕಾನೂನು ಪದವಿ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

* ಕಿರಿಯ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವಿರಬೇಕು.

* ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು ಹುದ್ದೆಗಳಿಗೆ ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿಬೇಕು. ಹಗ್ಯ್ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಹಿರಿಯ ದರ್ಜೆಯ ಬೆರಳಚ್ಚುಗಾರರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ

* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ಗರಿಷ್ಠ 38 ವರ್ಷ ಹಾಗೂ ಎಸ್ ಸಿ, ಎಸ್ ಟಿ ಪ್ರವರ್ಗ 1 ಅಭ್ಯರ್ಥಿಗಳು ಗರಿಷ್ಠ 40 ವರ್ಷ ದಾಟಿರಬಾರದು.

ಅರ್ಜಿ ಶುಲ್ಕ:

* ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ. 750

* ಎಸ್ ಸಿ , ಎಸ್ ಟಿ, ಪ್ರ1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ. 500

* ವಿಕಲಚೇತನ ಅಭ್ಯರ್ಥಿಗಳಿಗೆ – ರೂ. 250

ಪ್ರಮುಖ ದಿನಾಂಕಗಳು

* ಅರ್ಜಿ ಸಲಿಸಲು ಪ್ರಾರಂಭ ದಿನಾಂಕ : ಡಿಸೆಂಬರ್ 04-2024

* ಅರ್ಜಿ ಸಲಿಸಲು ಕೊನೆಯ ದಿನಾಂಕ – ಜನವರಿ-03-2025

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:03 pm, Thu, 5 December 24