
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(KEA) ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಸಂಚಾರ ವ್ಯವಸ್ಥಾಪಕ(Assistant Traffic Manager) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 10ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
| ಪೋಸ್ಟ್ ಹೆಸರು | ಪೋಸ್ಟ್‌ಗಳ ಸಂಖ್ಯೆ |
| ಸಹಾಯಕ ಆಡಳಿತ ಅಧಿಕಾರಿ | 2 |
| ಸಹಾಯಕ ಲೆಕ್ಕಪತ್ರ ಅಧಿಕಾರಿ | 2 |
| ಸಹಾಯಕ ಕಾನೂನು ಅಧಿಕಾರಿ | 6 |
| ಸಹಾಯಕ ಕಾರ್ಮಿಕ ಕಲ್ಯಾಣ ಅಧಿಕಾರಿ | 5 |
| ಸಹಾಯಕ ಮೆಕ್ಯಾನಿಕಲ್ ಎಂಜಿನಿಯರ್ | 8 |
| ಸಹಾಯಕ ಸಂಚಾರ ವ್ಯವಸ್ಥಾಪಕರು | 10 |
ಕೆಇಎ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಬಿ.ಕಾಂ, ಎಲ್‌ಎಲ್‌ಬಿ, ಬಿಇ/ ಬಿ.ಟೆಕ್, ಸ್ನಾತಕೋತ್ತರ ಪದವಿ, ಎಂಬಿಎ, ಸ್ನಾತಕೋತ್ತರ ಪದವಿ, ಎಂಎಸ್‌ಡಬ್ಲ್ಯೂ ಪೂರ್ಣಗೊಳಿಸಿರಬೇಕು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 29-09-2025 ರಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ ವಯಸ್ಸಿನವರಾಗಿರಬೇಕು. ವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು SC, ST, Cat-I ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತಿದೆ.
ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ರೈಲ್ವೆ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ; 10th ಪಾಸಾಗಿದ್ರೆ ಸಾಕು
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ