PSI Key Answers: ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಪ್ರಕಟ

| Updated By: ರಮೇಶ್ ಬಿ. ಜವಳಗೇರಾ

Updated on: Jan 30, 2024 | 7:38 PM

PSI Exam Key Answers: ಪಿಎಸ್‌ಐ ಮರು ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಕೆಇಎ ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ತಾತ್ಕಾಲಿಕ ಕೀ ಉತ್ತರಗಳನ್ನು ಪಡೆಯಬಹುದಾಗಿದೆ.

PSI Key Answers: ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಪ್ರಕಟ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು, (ಜನವರಿ 30): 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯ (PSI Exam) ತಾತ್ಕಾಲಿಕ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ತಾತ್ಕಾಲಿಕ ಕೀ ಉತ್ತರಗಳನ್ನು ಪಡೆಯಬಹುದಾಗಿದೆ. ಇನ್ನು ಅಭ್ಯರ್ಥಿಗಳಲ್ಲಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜ.30ರಿಂದ ಫೆಬ್ರುವರಿ 5ರೊಳಗೆ ಸಲ್ಲಿಸಬಹುದಾಗಿದೆ ಎಂದು ಕೆಇಎ ತಿಳಿಸಿದೆ.

ಕಳೆದ ಬಾರಿ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈ ಬಾರಿ ಜನವರಿ 23ರಂದು ಕಟ್ಟೆಚ್ಚರದಿಂದ ಮರು ಪರೀಕ್ಷೆ ನಡೆಸಲಾಗಿತ್ತು. ಇದೀಗ ಮರು ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜ.30ರಿಂದ ಫೆಬ್ರುವರಿ 5ರ ಸಂಜೆ 5 ಗಂಟೆಯೊಳಗೆ ಕೆಇಎ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಲಿಂಕ್ (https://cetonline.karnataka.gov.in/keaobjections/forms/Login.aspx) ಬಳಸಿ ತಾತ್ಕಾಲಿಕ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ಪಿಎಸ್‌ಐ ಮರು ಪರೀಕ್ಷೆಯ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು, ಅಭ್ಯರ್ಥಿಗಳು ಬುಕ್ಲೆಟ್‌ ಪ್ರಕಾರ ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು. ಆಕ್ಷೇಪಣೆ ಸಲ್ಲಿಸುವಾಗ ಅಗತ್ಯ ಪೂರಕ ದಾಖಲೆಗಳ ಸ್ಕ್ಯಾನ್ ಕಾಪಿಯನ್ನು ಲಗತ್ತಿಸುವುದು ಕಡ್ಡಾಯವಾಗಿರುತ್ತದೆ.

ಕೀ ಉತ್ತರ ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 7:30 pm, Tue, 30 January 24