KFD Recruitment 2023: ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ: ಮಾಸಿಕ ವೇತನ 32 ಸಾವಿರ ರೂ.
KFD Recruitment 2023: ಈ ನೇಮಕಾತಿ ಅಡಿಯಲ್ಲಿ ಒಟ್ಟು 19 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 29 ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.
KFD Recruitment 2023: ಕರ್ನಾಟಕ ಅರಣ್ಯ ಇಲಾಖೆಯು ಆನೆ ಕಾವಾಡಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೊಡಗು, ಚಾಮರಾಜನಗರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ನೇಮಕಾತಿ ಅಡಿಯಲ್ಲಿ ಒಟ್ಟು 19 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 29 ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಇನ್ನು ಈ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ. ಅಂದರೆ ಅಂಚೆಯ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಸಂಸ್ಥೆಯ ಹೆಸರು : ಕರ್ನಾಟಕ ಅರಣ್ಯ ಇಲಾಖೆ (KFD)
- ಹುದ್ದೆಗಳ ಸಂಖ್ಯೆ: 19
- ಉದ್ಯೋಗ ಸ್ಥಳ: ಕೊಡಗು, ಚಾಮರಾಜನಗರ, ಮೈಸೂರು, ಶಿವಮೊಗ್ಗ – ಕರ್ನಾಟಕ
- ಹುದ್ದೆಯ ಹೆಸರು: ಆನೆ ಕವಾಡಿಗ
ಶೈಕ್ಷಣಿಕ ಅರ್ಹತೆ:
KFD ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರಬೇಕು. ಇದರ ಹೊರತಾಗಿ ಯಾವುದೇ ನಿರ್ದಿಷ್ಟ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಲಾಗಿಲ್ಲ.
ವಯೋಮಿತಿ:
ಕರ್ನಾಟಕ ಅರಣ್ಯ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ರಿಂದ 35 ವರ್ಷಗಳ ಒಳಗಿರಬೇಕು.
ವಯೋಮಿತಿ ಸಡಿಲಿಕೆ:
2A, 2B, 3A, 3B, OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಹಾಗೆಯೇ SC, ST ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇದೆ.
ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 18600 ರಿಂದ 32600/- ರೂ. ನೀಡಲಾಗುತ್ತದೆ.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಏಪ್ರಿಲ್ 29, 2023.
ಈ ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಲಿಂಕ್‌ಗಳು:
- ಅಧಿಕೃತ ಅಧಿಸೂಚನೆ – ಕೊಡಗು: ಇಲ್ಲಿ ಕ್ಲಿಕ್ ಮಾಡಿ
- ಅಧಿಕೃತ ಅಧಿಸೂಚನೆ – ಮೈಸೂರು: ಇಲ್ಲಿ ಕ್ಲಿಕ್ ಮಾಡಿ
- ಅಧಿಕೃತ ಅಧಿಸೂಚನೆ – ಶಿವಮೊಗ್ಗ: ಇಲ್ಲಿ ಕ್ಲಿಕ್ ಮಾಡಿ
- ಅಧಿಕೃತ ಅಧಿಸೂಚನೆ – ಚಾಮರಾಜನಗರ: ಇಲ್ಲಿ ಕ್ಲಿಕ್ ಮಾಡಿ
- ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
- ಅಧಿಕೃತ ವೆಬ್ಸೈಟ್: aranya.gov.in
Published On - 2:38 pm, Sun, 19 March 23