KITS Recruitment 2025: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ; ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಇನ್ನೋವೇಷನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ (KITS) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ವಾರ್ಷಿಕ ರೂ. 48-50 ಲಕ್ಷ ವೇತನದೊಂದಿಗೆ ಬೆಂಗಳೂರಿನಲ್ಲಿರುವ ಈ ಹುದ್ದೆಗೆ MBBS ಮತ್ತು PhD ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿದೆ. ಜೂನ್ 7 ರೊಳಗೆ ಅರ್ಜಿ ಸಲ್ಲಿಸಿ.

KITS Recruitment 2025: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ; ಕೂಡಲೇ ಅರ್ಜಿ ಸಲ್ಲಿಸಿ
Kits Ceo Recruitment 2025

Updated on: May 08, 2025 | 12:41 PM

ಕರ್ನಾಟಕ ಇನ್ನೋವೇಶನ್ ಆ್ಯಂಡ್​ ಟೆಕ್ನಾಲಜಿ ಸೊಸೈಟಿಯು (KITS) ಅಧಿಕೃತ ಅಧಿಸೂಚನೆಯ ಮೂಲಕ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜೂನ್ 07 ರೊಳಗೆ ಅರ್ಜಿ ಸಲ್ಲಿಸಿ.

KITS ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಕರ್ನಾಟಕ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ (KITS)
  • ಹುದ್ದೆಗಳ ಸಂಖ್ಯೆ: 01
  • ಉದ್ಯೋಗ ಸ್ಥಳ: ಬೆಂಗಳೂರು
  • ಹುದ್ದೆಯ ಹೆಸರು: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO)
  • ಸಂಬಳ: ವಾರ್ಷಿಕ ರೂ.4800000-5000000/-

ಅರ್ಹತಾ ವಿವರಗಳು:

  • ಶೈಕ್ಷಣಿಕ ಅರ್ಹತೆ: KITS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MBBS, Ph.D ಪೂರ್ಣಗೊಳಿಸಿರಬೇಕು.
  • ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಇದನ್ನೂ ಓದಿ: ನೀವು ಲಕ್ಷಗಳಲ್ಲಿ ಸಂಬಳ ಬಯಸಿದರೆ ಈ ನೇಮಕಾತಿಗೆ ತಕ್ಷಣ ಅರ್ಜಿ ಸಲ್ಲಿಸಿ; ಸಂಪೂರ್ಣ ವಿವರ ಇಲ್ಲಿದೆ

KITS ನೇಮಕಾತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ gm2.ktech@ka.gov.in ಇ-ಮೇಲ್ ಐಡಿಗೆ ಜೂನ್ 07ರೊಳಗೆ ಅಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಕಳುಹಿಸಬೇಕು.

ಇದನ್ನೂ ಓದಿ
ಕೃಷಿ ಎಂಜಿನಿಯರಿಂಗ್‌ನಲ್ಲಿ ಹಲವು ಉದ್ಯೋಗವಕಾಶ; ತಿಂಗಳಿಗೆ ಲಕ್ಷ ಲಕ್ಷ ಸಂಬಳ!
ಪಿಯುಸಿ ಪಾಸ್ ಆದವರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗಾವಕಾಶ
ಇಸ್ರೋದಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ನೇಮಕಾತಿ
ನಾಸಾದಲ್ಲಿಯೂ ಇಂಟರ್ನ್‌ಶಿಪ್ ಅವಕಾಶವಿದೆಯೇ?

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us