AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KMF SHIMUL Recruitment: ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಹುದ್ದೆಗಳಿಗೆ ನೇಮಕಾತಿ; 10ರಿಂದ ಪದವೀಧರರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಸಹಾಯಕ ವ್ಯವಸ್ಥಾಪಕ, ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿಯಿಂದ ಸ್ನಾತಕೋತ್ತರ ಪದವಿ ಪಡೆದವರಿಗೆ ಇದು ಉತ್ತಮ ಅವಕಾಶ. ಸರ್ಕಾರಿ ಉದ್ಯೋಗ ಬಯಸುವವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕದ ವಿವರಗಳು ಲಭ್ಯ. ಕರ್ನಾಟಕದಲ್ಲಿ ಸ್ಥಿರ ಉದ್ಯೋಗ ಪಡೆಯಲು ಇದೊಂದು ಸುವರ್ಣಾವಕಾಶ.

KMF SHIMUL Recruitment: ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಹುದ್ದೆಗಳಿಗೆ ನೇಮಕಾತಿ; 10ರಿಂದ ಪದವೀಧರರವರೆಗೆ ಅರ್ಜಿ ಸಲ್ಲಿಸಲು ಅವಕಾಶ
ಕರ್ನಾಟಕದ ಹಾಲು ಒಕ್ಕೂಟದಲ್ಲಿ ನೇಮಕಾತಿ
ಅಕ್ಷತಾ ವರ್ಕಾಡಿ
|

Updated on:Feb 11, 2026 | 6:11 PM

Share

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ಒದಗಿಸಿದೆ. ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹಾಗೂ ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಸಂಸ್ಥೆಯಲ್ಲಿ ಸ್ಥಿರ ಉದ್ಯೋಗ ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರವರಿ 21 ರವರೆಗೆ ವಿಸ್ತರಿಸಲಾಗಿದೆ.

ಸಂಸ್ಥೆಯ ವಿವರಗಳು:

  • ಸಂಸ್ಥೆ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟ (KMF SHIMUL )
  • ಒಟ್ಟು ಹುದ್ದೆಗಳು: 194
  • ಉದ್ಯೋಗ ಸ್ಥಳ: ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ
  • ಹುದ್ದೆಗಳ ಹೆಸರು: ಸಹಾಯಕ ವ್ಯವಸ್ಥಾಪಕರು, ಜೂನಿಯರ್ ಟೆಕ್ನಿಷಿಯನ್

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, ಪದವಿ, B.Sc, B.Com, BBA, BBM, BE/B.Tech, BVSc & AH, M.Sc, MBA ಈಅರ್ಹತೆಗಳಲ್ಲಿ ಯಾವುದಾದರೂ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ:

  • ಕನಿಷ್ಠ ವಯಸ್ಸು: 18 ವರ್ಷ
  • ಗರಿಷ್ಠ ವಯಸ್ಸು: 35 ವರ್ಷ

ವಯಸ್ಸಿನ ಸಡಿಲಿಕೆ:

  • 2A/2B/3A/3B ಅಭ್ಯರ್ಥಿಗಳು – 3 ವರ್ಷ
  • SC/ST/ಪ್ರವರ್ಗ-I ಅಭ್ಯರ್ಥಿಗಳು – 5 ವರ್ಷ

ಅರ್ಜಿ ಶುಲ್ಕ:

  • SC/ST/ಪ್ರವರ್ಗ-I/PWD – 500ರೂ.
  • ಇತರರು – 1000 ರೂ.

ಅಭ್ಯರ್ಥಿಗಳ ಆಯ್ಕೆ ಕೆಳಗಿನ ಹಂತಗಳ ಮೂಲಕ ನಡೆಯಲಿದೆ:

  • ಲಿಖಿತ ಪರೀಕ್ಷೆ
  • ಅರ್ಹತಾ ಪಟ್ಟಿ (ಮೆರಿಟ್ ಲಿಸ್ಟ್)
  • ಮೌಖಿಕ ಸಂದರ್ಶನ

ಇದನ್ನೂ ಓದಿ: ಬಡ ಮಕ್ಕಳಿಗೆ ವಿದ್ಯಾ ದೇವತೆಯಾದ ಭಾರತೀಯ ಶಿಕ್ಷಕಿಗೆ ವಿಶ್ವ ಮನ್ನಣೆ: ‘ಜಾಗತಿಕ ಶಿಕ್ಷಕ ಪ್ರಶಸ್ತಿ’ ಪಡೆದ ರೂಬಲ್ ನಾಗಿ

ಅರ್ಜಿ ಸಲ್ಲಿಸುವ ವಿಧಾನ:

ಮೊದಲು KMF SHIMUL ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತಾ ಮಾನದಂಡಗಳನ್ನು ಪರಿಶೀಲಿಸಬೇಕು. ನಂತರ ಆನ್‌ಲೈನಲ್ಲಿ ಅಧಿಕೃತ ವೆಬ್​ಸೈಟ್​​ ಮೂಲಕ ಅರ್ಜಿ ಸಲ್ಲಿಸಿ. ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಗಳು ಮತ್ತು ಇತ್ತೀಚಿನ ಛಾಯಾಚಿತ್ರವನ್ನು ಅಪ್‌ಲೋಡ್ ಮಾಡಿ. ಬಳಿಕ ವರ್ಗಾನುಸಾರ ಅರ್ಜಿ ಶುಲ್ಕ ಪಾವತಿಸಿ ‘Apply’ ಬಟನ್ ಕ್ಲಿಕ್ ಮಾಡಿ. ಕೊನೆಗೆ ಅರ್ಜಿ ಸಂಖ್ಯೆ ಅಥವಾ ರೆಫರೆನ್ಸ್ ಸಂಖ್ಯೆಯ ಪ್ರಿಂಟ್​ ಕಾಪಿ ಡೌನ್ಲೋಡ್​ ಮಾಡಿ ಇಟ್ಟುಕೊಳ್ಳಿ.

ಈ ನೇಮಕಾತಿ ಕರ್ನಾಟಕದ ಹಾಲು ಒಕ್ಕೂಟದಲ್ಲಿ ಕೆಲಸ ಮಾಡಲು ಬಯಸುವವರಿಗೆ ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Wed, 11 February 26

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ