KMF Recruitment 2023: ಕರ್ನಾಟಕದಲ್ಲಿ ಉದ್ಯೋಗಾವಕಾಶ: ವೇತನ 97 ಸಾವಿರ ರೂ.
KMF SHIMUL Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಶಿಮುಲ್) ಅಧಿಕೃತ ವೆಬ್ಸೈಟ್ www.shimul.coop ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
KMF SHIMUL Recruitment 2023: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ (KMF) ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಮೂಲಕ ಕೆಎಂಎಫ್ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 194 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಶಿಮುಲ್) ಅಧಿಕೃತ ವೆಬ್ಸೈಟ್ www.shimul.coop ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ)- 17 ಹುದ್ದೆಗಳು
- ಸಹಾಯಕ ವ್ಯವಸ್ಥಾಪಕರು (ಆಡಳಿತ)- 1 ಹುದ್ದೆಗಳು
- ಸಹಾಯಕ ವ್ಯವಸ್ಥಾಪಕರು (F&F)- 3 ಹುದ್ದೆಗಳು
- ಎಂಐಎಸ್ /ಸಿಸ್ಟಂ ಆಫೀಸರ್- 1 ಹುದ್ದೆ
- ಮಾರುಕಟ್ಟೆ ಅಧಿಕಾರಿ- 2 ಹುದ್ದೆಗಳು
- ಲೆಕ್ಕ ಸಹಾಯಕ (ದರ್ಜೆ 2)- 12 ಹುದ್ದೆಗಳು
- ಮಾರುಕಟ್ಟೆ ಸಹಾಯಕ (ದರ್ಜೆ 2)- 10 ಹುದ್ದೆಗಳು
- ಕೆಮಿಸ್ಟ್ (ದರ್ಜೆ 2)- 28 ಹುದ್ದೆಗಳು
- ಕಿರಿಯ ಸಿಸ್ಟಂ ಆಪರೇಟರ್- 13 ಹುದ್ದೆಗಳು
- ಶೀಘ್ರ ಲಿಪಿಗಾರರು (ದರ್ಜೆ 2)-1 ಹುದ್ದೆಗಳು
- ಕಿರಿಯ ತಾಂತ್ರಿಕರು- 50 ಹುದ್ದೆಗಳು
- ತಾಂತ್ರಿಕ ಅಧಿಕಾರಿ (ಅಭಿಯಂತರ)- 2 ಹುದ್ದೆಗಳು
- ತಾಂತ್ರಿಕ ಅಧಿಕಾರಿ(ಗುಣನಿಯಂತ್ರಣ)- 2 ಹುದ್ದೆಗಳು
- ತಾಂತ್ರಿಕ ಅಧಿಕಾರಿ (ಡಿಟಿ)- 14 ಹುದ್ದೆಗಳು
- ಕೆಮಿಸ್ಟ್ (ದರ್ಜೆ 1)- 4 ಹುದ್ದೆಗಳು
- ವಿಸ್ತರಣಾಧಿಕಾರಿ (ದರ್ಜೆ 3)- 17 ಹುದ್ದೆಗಳು
- ಆಡಳಿತ ಸಹಾಯಕ (ದರ್ಜೆ 2)- 17 ಹುದ್ದೆಗಳು
- ಒಟ್ಟು – 194
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಯಾವುದೇ ಮಾನ್ಯತೆ ಪಡೆದಿ ವಿಶ್ವವಿದ್ಯಾಲಯ ಹಾಗೂ ಶಿಕ್ಷಣ ಮಂಡಳಿಯಿಂದ 10ನೇ ತರಗತಿ, ಪದವಿ, ಡಿಪ್ಲೋಮಾ, ಬಿಎಸ್ಸಿ, ಎಂಎಸ್ಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ 18 ರಿಂದ 35 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹಾಗೆಯೇ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ PWD ಮತ್ತು ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ವೇತನ ನಿಗದಿ ಮಾಡಲಾಗುತ್ತದೆ. ಅಂದರಂತೆ ಕನಿಷ್ಠ 21 ಸಾವಿರದಿಂದ ಗರಿಷ್ಠ 97 ಸಾವಿರದವರೆಗೆ ವೇತನ ಸಿಗಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.
ಅರ್ಜಿ ಶುಲ್ಕ:
- ಸಾಮಾನ್ಯ ಅಭ್ಯರ್ಥಿಗಳಿಗೆ- 1000 ರೂ.
- SC/ST/ಪ್ರವರ್ಗ-1 ಮತ್ತು PWD ಅಭ್ಯರ್ಥಿಗಳಿಗೆ- 500 ರೂ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಇದರಲ್ಲಿ ಪಾಸಾಗಿರುವ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 3, 2023.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.