Kodagu DCCB Recruitment 2025: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ, ಇಂದೇ ಅಪ್ಲೈ ಮಾಡಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Dec 23, 2024 | 5:56 PM

ಪದವಿ ಪೂರ್ಣಗೊಳಿಸಿದ್ದು, ಬ್ಯಾಂಕ್ ಉದ್ಯೋಗದ ಹುಡುಕಾಟದಲ್ಲಿದ್ದೀರಾ, ಅಂತಹವರಿಗೆ ಇಲ್ಲೊಂದು ಸುವರ್ಣ ಅವಕಾಶವಿದೆ. ಕೊಡಗು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ 32 ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಸಂಬಂಧ ಪಟ್ಟಂತೆ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ಪ್ರಕ್ರಿಯೆ ಹಾಗೂ ಅರ್ಜಿ ಶುಲ್ಕ ಸೇರಿದಂತೆ ಸಂಪೂರ್ಣ ಮಾಹಿತಿಯೂ ಈ ಕೆಳಗಿದೆ.

Kodagu DCCB Recruitment 2025: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ, ಇಂದೇ ಅಪ್ಲೈ ಮಾಡಿ
ಸಾಂದರ್ಭಿಕ ಚಿತ್ರ
Follow us on

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಶಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಬ್ಯಾಂಕ್ ನಲ್ಲಿ ಒಟ್ಟು 32 ಕಿರಿಯ ಸಹಾಯಕ ಹುದ್ದೆಗಳು ಖಾಲಿಯಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೋಡಿ ಜನವರಿ 16, 2025 ರೊಳಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರಗಳು

* ಸಂಸ್ಥೆಯ ಹೆಸರು : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್

* ಹುದ್ದೆ : ಜೂನಿಯರ್ ಅಸಿಸ್ಟೆಂಟ್

* ಉದ್ಯೋಗ ಸ್ಥಳ : ಕೊಡಗು

* ವೇತನ : ಮಾಸಿಕ ರೂ. 30,350 – ರೂ 58,250

ಶೈಕ್ಷಣಿಕ ಅರ್ಹತೆ

* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಶೇ 55% ಕನಿಷ್ಠ ಅಂಕದೊಂದಿಗೆ ವಾಣಿಜ್ಯೇತರ ಪದವಿ ಅಥವಾ ಶೇ 50 ಕನಿಷ್ಠ ಅಂಕದೊಂದಿಗೆ ವಾಣಿಜ್ಯ ಪದವಿ, ಡಿಪ್ಲೊಮೋ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

* ಕನಿಷ್ಠ 6 ತಿಂಗಳ ಡಿಪ್ಲೊಮೋ ಇನ್ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ಸ್ ಸರ್ಟಿಫಿಕೇಟ್ ಕೋರ್ಸ್ ಕಡ್ಡಾಯವಾಗಿ ಮಾಡಿರಬೇಕು.

ವಯೋಮಿತಿ ಹಾಗೂ ಆಯ್ಕೆ ವಿಧಾನ

* ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.

* ಸಾಮಾನ್ಯ ವರ್ಗದ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳ ಗರಿಷ್ಠ ವಯಸ್ಸು 38 ವರ್ಷ ಹಾಗೂ ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ದಾಟಿರಬಾರದು.

* ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ

* ಸಾಮಾನ್ಯ ವರ್ಗ ಹಾಗೂ ಇತರೆ ಹಿಂದುಳಿದ ಅಭ್ಯರ್ಥಿಗಳು ರೂ. 1750 ಶುಲ್ಕವನ್ನು ಪಾವತಿಸಬೇಕು.

* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ 1, ಮಹಿಳೆಯರು, ಅಂಗವಿಕಲ ಅಭ್ಯರ್ಥಿಗಳಿಗೆ ರೂ. 1250 ಶುಲ್ಕವಿರುತ್ತದೆ

ಅರ್ಜಿ ಸಲ್ಲಿಸುವುದು ಹೇಗೆ?

* ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಅಗತ್ಯವಿರುವ ದಾಖಲೆಗಳು ಇದೆಯೇ ಎಂದು ಪರಿಶೀಲಿಸಿಕೊಳ್ಳಿ.

* ಆ ಬಳಿಕ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ, ಆ ವೇಳೆ ಅಪ್ಲಿಕೇಷನ್ ತೆರೆದುಕೊಳ್ಳುತ್ತದೆ.

* ಈ ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ, ಒಮ್ಮೆ ಪರಿಶೀಲಿಸಿ.

* ತದನಂತರದಲ್ಲಿ ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.

* ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಆನ್ಲೈನ್ ನಲ್ಲಿ ಶುಲ್ಕ ಪಾವತಿಸಿದರೆ ಅರ್ಜಿ ಸಲ್ಲಿಕೆಯೂ ಪೂರ್ಣಗೊಳ್ಳುತ್ತದೆ.

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 20, 2024

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 16, 2025

* ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 17, 2025

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ