Kolar Ophthalmic Assistant Jobs: ಕೋಲಾರ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ; ಬಿ.ಎಸ್ಸಿ ಪದವೀಧರರು ಅರ್ಹರು
ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 3 ನೇತ್ರ ಚಿಕಿತ್ಸಾ ಸಹಾಯಕ (Ophthalmic Assistant) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬಿ.ಎಸ್ಸಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರು. ಮಾಸಿಕ ವೇತನ 15,114 ರೂ. ಎಂದು ನಿಗದಿಪಡಿಸಲಾಗಿದೆ. ಆಸಕ್ತರು ನವೆಂಬರ್ 25 ರಂದು ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಕೋಲಾರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಆಫ್ತಾಲ್ಮಿಕ್(ನೇತ್ರ ಚಿಕಿತ್ಸಾ ಸಹಾಯಕ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿದಡಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ನವೆಂಬರ್ 25 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹುದ್ದೆಯ ಅಧಿಸೂಚನೆ:
- ಹುದ್ದೆಗಳ ಸಂಖ್ಯೆ: 3
- ಉದ್ಯೋಗ ಸ್ಥಳ: ಕೋಲಾರ
- ಹುದ್ದೆ ಹೆಸರು: ಆಫ್ತಾಲ್ಮಿಕ್(ನೇತ್ರ ಚಿಕಿತ್ಸಾ ಸಹಾಯಕ)
- ವೇತನ: ತಿಂಗಳಿಗೆ 15,114 ರೂ.
ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ರೈಲ್ವೆ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ; 10th ಪಾಸಾಗಿದ್ರೆ ಸಾಕು
ಅರ್ಹತಾ ವಿವರಗಳು:
- ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಬಿ.ಎಸ್ಸಿ, ಪದವಿ, ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.
- ವಯೋಮಿತಿ: ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷ
- ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗಬೇಕು.
ವಿಳಾಸ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕೆಎನ್‌ಟಿಬಿ ಸ್ಯಾನಿಟೋರಿಯಂ ಆಸ್ಪತ್ರೆ ಆವರಣ, ಬಂಗಾರಪೇಟೆ ರಸ್ತೆ, ಕೋಲಾರ.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:55 pm, Fri, 21 November 25




