KPSC Jobs: ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!
KPSC Recruitment 2022: 18 ರಿಂದ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ/2ಬಿ/3ಎ &3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
KPSC AE Recruitment 2022: (KPSC) ಗ್ರೇಡ್-1 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್‌ಗಳ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ. ಅಗತ್ಯವಿರುವ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ kpsc.kar.nic.in ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿ ಈ ಕೆಳಗಿನಂತಿವೆ.
KPSC AE Recruitment 2022: ಒಟ್ಟು ಹುದ್ದೆಗಳ ಸಂಖ್ಯೆ; ಸಹಾಯಕ ಇಂಜಿನಿಯರ್ – 188 ಹುದ್ದೆಗಳು
KPSC AE Recruitment 2022: ಅರ್ಹತಾ ಮಾನದಂಡ: ಶೈಕ್ಷಣಿಕ ಅರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ / ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್ ಪದವಿ ಹೊಂದಿರುವ ಕರ್ನಾಟಕದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
KPSC AE Recruitment 2022: ವಯೋಮಿತಿ: 18 ರಿಂದ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ/2ಬಿ/3ಎ &3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
KPSC AE Recruitment 2022: ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ಕಂಪ್ಯೂಟರ್ ಜ್ಞಾನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
KPSC AE Recruitment 2022 ಗೆ ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಅಭ್ಯರ್ಥಿಗಳು KPSCಯ ಅಧಿಕೃತ ವೆಬ್‌ಸೈಟ್ kpsc.kar.nic.in ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬಹುದು.
KPSC AE Recruitment 2022 ಪ್ರಮುಖ ದಿನಾಂಕಗಳು: ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಮಾರ್ಚ್ 2022
ಈ ಹುದ್ದೆಗಳ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?
(KPSC AE Recruitment 2022 For 188 Posts)