KPSC Jobs: ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!

| Updated By: ಝಾಹಿರ್ ಯೂಸುಫ್

Updated on: Mar 02, 2022 | 9:04 PM

KPSC Recruitment 2022: 18 ರಿಂದ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ/2ಬಿ/3ಎ &3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

KPSC Jobs: ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!
KPSC Recruitment 2022
Follow us on

KPSC AE Recruitment 2022: (KPSC) ಗ್ರೇಡ್-1 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್‌ಗಳ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ. ಅಗತ್ಯವಿರುವ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ kpsc.kar.nic.in ಮೂಲಕ ಆನ್​ಲೈನ್​ನಲ್ಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿ ಈ ಕೆಳಗಿನಂತಿವೆ.

KPSC AE Recruitment 2022: ಒಟ್ಟು ಹುದ್ದೆಗಳ ಸಂಖ್ಯೆ;
ಸಹಾಯಕ ಇಂಜಿನಿಯರ್ – 188 ಹುದ್ದೆಗಳು

KPSC AE Recruitment 2022: ಅರ್ಹತಾ ಮಾನದಂಡ:
ಶೈಕ್ಷಣಿಕ ಅರ್ಹತೆ:
ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ / ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್ ಪದವಿ ಹೊಂದಿರುವ ಕರ್ನಾಟಕದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

KPSC AE Recruitment 2022: ವಯೋಮಿತಿ:
18 ರಿಂದ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ/2ಬಿ/3ಎ &3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

KPSC AE Recruitment 2022: ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳ ಆಯ್ಕೆಯನ್ನು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ಕಂಪ್ಯೂಟರ್ ಜ್ಞಾನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

KPSC AE Recruitment 2022 ಗೆ ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು KPSCಯ ಅಧಿಕೃತ ವೆಬ್​ಸೈಟ್​ kpsc.kar.nic.in ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬಹುದು.

KPSC AE Recruitment 2022 ಪ್ರಮುಖ ದಿನಾಂಕಗಳು:
ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಮಾರ್ಚ್ 2022

ಈ ಹುದ್ದೆಗಳ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(KPSC AE Recruitment 2022 For 188 Posts)