AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC Eligibility List: ಗೆಜೆಟೆಡ್ ಅಧಿಕಾರಿಗಳ ಹುದ್ದೆಯ ಅರ್ಹತಾ ಪಟ್ಟಿ ಪ್ರಕಟ

ಪ್ರಿಲಿಮ್ಸ್‌ ಮತ್ತು ಮುಖ್ಯ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಕೆಪಿಎಸ್​ಸಿ ಜಾಲತಾಣದ ಮೂಲಕ ಫಲಿತಾಂಶ ನೋಡಬಹುದು.

KPSC Eligibility List: ಗೆಜೆಟೆಡ್ ಅಧಿಕಾರಿಗಳ ಹುದ್ದೆಯ ಅರ್ಹತಾ ಪಟ್ಟಿ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jul 29, 2022 | 9:22 AM

Share

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission – KPSC) 2017-18ರ ಸಾಲಿನ ಗ್ರೂಪ್ 3 ಮತ್ತು ಗ್ರೂಪ್​ ಬಿ ಗೆಜೆಟೆಡ್ ಪ್ರೊಬೆಷನರಿ ಅಧಿಕಾರಿಗಳ ಹುದ್ದೆಯ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಘೋಷಿಸಿದೆ. ಇವರನ್ನು ಕರ್ನಾಟಕ ಆಡಳಿತ ಸೇವೆಗೆ (Karnataka Administration Service – KAS) ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಪ್ರಿಲಿಮ್ಸ್‌ ಮತ್ತು ಮುಖ್ಯ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಕೆಪಿಎಸ್​ಸಿ ಜಾಲತಾಣದ ಮೂಲಕ ಫಲಿತಾಂಶ ನೋಡಬಹುದು. ವೈಯಕ್ತಿಕ ಸಂದರ್ಶನಕ್ಕೆ ಆಯ್ಕೆಯಾಗಿರುವ ಅಭ್ಯರ್ಥಿಗಳ 1:3 ಅನುಪಾತದ ಅರ್ಹತಾ ಪಟ್ಟಿಯನ್ನು ಇದೀಗ ವೆಬ್​ಸೈಟ್​ಗೆ kpsc.kar.nic.in ಅಪ್​ಲೋಡ್ ಮಾಡಲಾಗಿದೆ. ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ.

2020ರಲ್ಲಿ ಅಧಿಸೂಚನೆ ಹೊರಡಿಸಿದ್ದ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ 2017-18ರಲ್ಲಿ ಪರೀಕ್ಷೆ ಬರೆದಿದ್ದ 318 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಅರ್ಹತಾ ಪಟ್ಟಿ ಬಿಡುಗಡೆ ಮಾಡಲಾಗಿದೆ. ನೋಂದಣಿ ಸಂಖ್ಯೆಯ ಮೂಲಕ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಈ ಪಟ್ಟಿಯಲ್ಲಿ ನೋಂದಣಿ ಸಂಖ್ಯೆ ಇರುವ ಅಭ್ಯರ್ಥಿಗಳು ಕೆಪಿಎಸ್​ಸಿ ಸೂಚಿಸಿರುವ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕಿದೆ. ವ್ಯಕ್ತಿತ್ವ ಪರೀಕ್ಷೆಗಾಗಿ (ಪರ್ಸನಾಲಿಟಿ ಟೆಸ್ಟ್​) ದಿನಾಂಕ, ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ.

ಕೆಪಿಎಸ್​ಸಿ ಪರೀಕ್ಷೆಯ ಫಲಿತಾಂಶ ವರ್ಷಗಟ್ಟಲೆ ತಡವಾಗಿರುವುದು ಪ್ರಶ್ನಿಸಿ ಸಾವಿರಾರು ಅಭ್ಯರ್ಥಿಗಳು ಕೆಪಿಎಸ್​ಸಿ ಕಾರ್ಯಾಲಯ ಇರುವ ‘ಉದ್ಯೋಗ ಭವನ’ದ ಎದುರು ಕಳೆದ ಸೋಮವಾರ (ಜುಲೈ 25) ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾನಿರತರೊಂದಿಗೆ ಮಾತನಾಡಿದ್ದ ಕೆಪಿಎಸ್​ಸಿ ನೂತನ ಕಾರ್ಯದರ್ಶಿ ವಿಕಾಸ್ ಕಿಶೋರ್, ಶೀಘ್ರ ಫಲಿತಾಂಶ ಪ್ರಕಟಿಸುವ ಭರವಸೆ ನೀಡಿದ್ದರು. ಇದೀಗ ಫಲಿತಾಂಶ ಪ್ರಕಟವಾಗಿದ್ದು, ಮುಂದಿನ ಪ್ರಕ್ರಿಯೆಗಳು ಇನ್ನಷ್ಟೇ ನಡೆಯಬೇಕಿದೆ.

Published On - 9:21 am, Fri, 29 July 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?