KPSC Recruitment 2022: ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಅಹ್ವಾನ; ಇಲ್ಲಿದೆ ಹೆಚ್ಚಿನ ಮಾಹಿತಿ
ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) ನಿಯಮಗಳು 2021ರ ಅನ್ವಯ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಜತೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
KPSC Recruitment 2022: ಕರ್ನಾಟಕ ಲೋಕಸೇವಾ ಆಯೋಗವು (KPSC) ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ (ನಗರಸಭೆ ಅಥವಾ ಪುರಸಭೆ ಅಥವಾ ಪಟ್ಟಣ ಪಂಚಾಯತಿ) ಗ್ರೂಪ್ ಸಿ ವೃಂದದ ಹುದ್ದೆಗಳನ್ನು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) ನಿಯಮಗಳು 2021ರ ಅನ್ವಯ ಸ್ಪರ್ಧಾತ್ಮಕ ಪರೀಕ್ಷೆ(Exam) ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಜತೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ (online) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
KPSC Recruitment 2022: ಹುದ್ದೆಗಳ ವಿವರ:
ಕಿರಿಯ ಅಭಿಯಂತರರು (ಸಿವಿಲ್): 89 ಹುದ್ದೆಗಳು ಕಿರಿಯ ಆರೋಗ್ಯ ನಿರೀಕ್ಷಕರು: 57 ಹುದ್ದೆಗಳು ಎಲೆಕ್ಟ್ರೀಷಿಯನ್ ಗ್ರೇಡ್-1: 02 ಹುದ್ದೆಗಳು ಎಲೆಕ್ಟ್ರೀಷಿಯನ್ ಗ್ರೇಡ್-2: 10 ಹುದ್ದೆಗಳು ನೀರು ಸರಬರಾಜು ಆಪರೇಟರ್: 89 ಹುದ್ದೆಗಳು ಸಹಾಯಕ ನೀರು ಸರಬರಾಜು ಆಪರೇಟರ್: 163 ಹುದ್ದೆಗಳು
KPSC Recruitment 2022: ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 31-03-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-04-2022 (ರಾತ್ರಿ 11: 45 ಗಂಟೆಯೊಳಗೆ)
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 30-04-2022
KPSC Recruitment 2022: ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ಮೂಲ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
KPSC Recruitment 2022: ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: MMRCL Recruitment 2022: ಮುಂಬೈ ಮೆಟ್ರೋದಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ