Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC Group A & B Recruitment 2024: ಕೆಎಎಸ್ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಮುಂದಿನ ವಾರದಿಂದ ಅರ್ಜಿ ಸಲ್ಲಿಸಿ

KPSC Group A & B Recruitment 2024: ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ (ಹೈ-ಕ) ಸೇರಿದಂತೆ ಒಟ್ಟಾರೆ 384 ಹುದ್ದೆಗಳಲ್ಲಿ ‘ಗ್ರೂಪ್ ಎ' 159, ‘ಗ್ರೂಪ್ -ಬಿ' 225 ಹುದ್ದೆಗಳಿವೆ. ಪೂರ್ವಭಾವಿ ಪರೀಕ್ಷೆ (ಬಹುಆಯ್ಕೆ ಮಾದರಿಯ ಪ್ರಶ್ನೆಗಳು), ಮುಖ್ಯ ಪರೀಕ್ಷೆ (ವಿವರಣಾತ್ಮಕ) ಮತ್ತು ವ್ಯಕ್ತಿತ್ವ ಪರೀಕ್ಷೆ ಎಂಬ ಮೂರು ಹಂತಗಳಲ್ಲಿ ಈ ನೇಮಕಾತಿ ನಡೆಯಲಿದೆ. ಮೇ 5ರಂದು ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ.

KPSC Group A & B Recruitment 2024: ಕೆಎಎಸ್ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಮುಂದಿನ ವಾರದಿಂದ ಅರ್ಜಿ ಸಲ್ಲಿಸಿ
ಕೆಎಎಸ್ ಹುದ್ದೆಗಳಿಗೆ ಮುಂದಿನ ವಾರದಿಂದ ಅರ್ಜಿ ಸಲ್ಲಿಸಿ
Follow us
ಸಾಧು ಶ್ರೀನಾಥ್​
|

Updated on: Mar 02, 2024 | 10:50 AM

ಬೆಂಗಳೂರು, ಮಾರ್ಚ್ ​​2: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) 2023-24ನೆ ಸಾಲಿನ 384 ‘ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್’ (KAS -ಕೆಎಎಸ್) ಹುದ್ದೆಗಳ ನೇಮಕಾತಿಗಾಗಿ (KPSC Group A & B Recruitment 2024) ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 4ರಿಂದ ಏಪ್ರಿಲ್​​ 3ರವರೆಗೆ ಅವಕಾಶವನ್ನು ಕಲ್ಪಿಸಿದೆ. ಅರ್ಜಿ ಸಲ್ಲಿಸುವ ಶುಲ್ಕ ಸಾಮಾನ್ಯ ವರ್ಗದವರಿಗೆ 600 ರೂ., ಪ್ರ ವರ್ಗ 2ಎ, 2ಬಿ, 3ಎ, 3ಬಿ ಗಳಿಗೆ 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಪದವಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮಾನವಾದ ವಿದ್ಯಾರ್ಹತೆಯನ್ನು ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಕನಿಷ್ಠ 21 ವರ್ಷ ವಯಸ್ಸು ಮೀರಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ 38, ಪ್ರವರ್ಗ 2ಎ, 2ಬಿ, 3ಎ, 3ಬಿಗಳಿಗೆ 41 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 43 ವರ್ಷ ಆಗಿರುತ್ತದೆ.

ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ (ಹೈ-ಕ) ಸೇರಿದಂತೆ ಒಟ್ಟಾರೆ 384 ಹುದ್ದೆಗಳಲ್ಲಿ ‘ಗ್ರೂಪ್ ಎ’ 159, ‘ಗ್ರೂಪ್ -ಬಿ’ 225 ಹುದ್ದೆಗಳಿವೆ. ಪೂರ್ವಭಾವಿ ಪರೀಕ್ಷೆ (ಬಹುಆಯ್ಕೆ ಮಾದರಿಯ ಪ್ರಶ್ನೆಗಳು), ಮುಖ್ಯ ಪರೀಕ್ಷೆ (ವಿವರಣಾತ್ಮಕ) ಮತ್ತು ವ್ಯಕ್ತಿತ್ವ ಪರೀಕ್ಷೆ ಎಂಬ ಮೂರು ಹಂತಗಳಲ್ಲಿ ಈ ನೇಮಕಾತಿ ನಡೆಯಲಿದೆ. ಮೇ 5ರಂದು ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ kpsc.kar.nic.in ಆಯೋಗದ ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದು ಕೆಪಿಎಸ್ಸಿ ಪ್ರಕಟಣೆ ಕೋರಿದೆ.

ಅರ್ಜಿಗಳನ್ನು ಆನ್‌ಲೈನ್‌ (Online) ಮೂಲಕವೇ ಭರ್ತಿ ಮಾಡಿ ಭಾವಚಿತ್ರ /ಸಹಿ /ವಯೋಮಿತಿ/ ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಅಪ್​​ಲೋಡ್ ಮಾಡಬೇಕು. ನಂತರ ಶುಲ್ಕವನ್ನು ನೆಟ್ ಬ್ಯಾಂಕಿಂಗ್ / ಡೆಬಿಟ್‌ ಕಾರ್ಡ್/ ಕ್ರೆಡಿಟ್‌ ಕಾರ್ಡ್‌/ ಯುಪಿಐ ಮೂಲಕ ಸಂದಾಯ ಮಾಡಬಹುದಾಗಿರುತ್ತದೆ. ಶುಲ್ಕವನ್ನು ಪಾವತಿಸದ ಹಾಗೂ ದಾಖಲೆಗಳನ್ನು/ ಭಾವಚಿತ್ರ/ ಸಹಿಯನ್ನು ಅಪ್ಲೋಡ್ ಮಾಡದೇ ಇರುವ/ಅಸ್ಪಷ್ಟ ದಾಖಲೆಗಳನ್ನು ಅಪ್ಲೋಡ್ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಕೆಪಿಎಸ್‌ಸಿ ಜಾಹಿರಾತು ತಿಳಿಸಿದೆ.

Also Read: ಶೀಘ್ರವೇ ಗ್ರಾಮ ಲೆಕ್ಕಿಗರ ನೇಮಕಾತಿ ನಡೆಯಲಿದೆ ಎಂದ ಕಂದಾಯ ಸಚಿವ​, ಅರ್ಹತೆ ಮತ್ತು ಹುದ್ದೆಗಳ ವಿವರ ಇಲ್ಲಿದೆ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ