ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ: ಹೊಸ ದಿನಾಂಕ ನಿಗದಿಪಡಿಸಿದ ಕೆಪಿಎಸ್​​ಸಿ

|

Updated on: Aug 05, 2024 | 9:45 PM

ಲೋಕಸಭಾ ಚುನಾವಣೆ ಸೇರಿ ವಿವಿಧ ಕಾರಣಗಳಿಂದ ಹಲವು ಬಾರಿ ಮುಂದೂಡಿಕೆಯಾಗಿದ್ದ ಕೆಎಎಸ್‌ ಪೂರ್ವ ಭಾವಿ ಪರೀಕ್ಷೆಯನ್ನು(KAS Recruitment 2024) ಆಗಸ್ಟ್​ 25ಕ್ಕೆ ನಿಗದಿಪಡಿಸಲಾಗಿತ್ತು. ಆದರೆ, ಅಂದೇ ಐಬಿಪಿಎಸ್​ ಪರೀಕ್ಷೆ ನಡೆಯುತ್ತಿರುವುದರಿಂದ ಕೆಪಿಎಸ್‌ಸಿಯು ಕೆಎಎಸ್‌ ಪರೀಕ್ಷೆಯನ್ನು ಮುಂದೂಡಿದ್ದು, ಹೊಸ ದಿನಾಂಕ ಇಲ್ಲಿದೆ ನೋಡಿ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ: ಹೊಸ ದಿನಾಂಕ ನಿಗದಿಪಡಿಸಿದ ಕೆಪಿಎಸ್​​ಸಿ
KPSC
Follow us on

ಬೆಂಗಳೂರು, (ಆಗಸ್ಟ್​ 05): 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಆಗಸ್ಟ್​ 25ರಂದು ನಿಗದಿಯಾಗಿದ್ದ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆಯಾಗಿದೆ. ಆ.25ರಂದೇ ಬ್ಯಾಂಕಿಂಗ್‌ ಪರೀಕ್ಷೆ ನಿಗದಿಯಾಗಿದ್ದರಿಂದ ಕೆಎಎಸ್‌ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಕೆಪಿಎಸ್​ಸಿ ಪರೀಕ್ಷೆ ದಿನಾಂಕ ಮುಂದೂಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಕೆಪಿಎಸ್‌ಸಿಗೆ ಸೂಚಿಸಿದ್ದರು. ಅದರಂತೆ ಇದೀಗ ಆಗಸ್ಟ್​ 25ರ ಬದಲಾಗಿ ಆ. 27ರ ಮಂಗಳವಾರದಂದು ನಡೆಸಲು ತೀರ್ಮಾನಿಸಲಾಗಿದೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆಗೆ ಈಗಾಗಲೇ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿರುವ ಕಾರಣದಿಂದ ಹಾಗೂ ಮುಖ್ಯ ಮಂತ್ರಿಗಳು ಕರ್ನಾಟಕ ಲೋಕಸೇವಾ ಆಯೋಗದೊಂದಿಗೆ ಸಮಾಲೋಚಿಸಿ ಅಲ್ಪಕಾಲ ಗೆಜೆಟೆಡ್ ಪ್ರೊಬೇಷನರ್ಸ್‌ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ಸೂಚಿಸಿರುವುದರಿಂದ ಆ. 27ರ ಮಂಗಳವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.

ಇದನ್ನೂ ಓದಿ: ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ನಡೆಸಲು KEA ತಯಾರಿ, ಹೊಸ ತಂತ್ರಜ್ಞಾನಕ್ಕೆ 10 ಕೋಟಿ ಟೆಂಡರ್

ಆ.25ರಂದು ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸಲು ಈಗಾಗಲೇ ಒಟ್ಟು 564 ಪರೀಕ್ಷಾ ಉಪಕೇಂದ್ರಗಳಿಂದ ಒಪ್ಪಿಗೆ ಪತ್ರಗಳನ್ನು ಪಡೆದು ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾಗಿತ್ತು. ಆದರೆ, ಅಂದು (ಆಗಸ್ಟ್​ 25) ಐ.ಬಿ.ಪಿ.ಎಸ್. ಪರೀಕ್ಷೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಅವರೊಂದಿಗೆ ಚರ್ಚಿಸಿ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಆ.27ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

ಹೊಸ ಹೊಸ ಉದ್ಯೋಗಗಳ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ