KPSC Recruitment 2022: ಕೆಪಿಎಸ್​ಸಿ ನೇಮಕಾತಿ: ತಿಂಗಳಿಗೆ ವೇತನ 83 ಸಾವಿರ ರೂ.

KPSC Recruitment 2022: ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

KPSC Recruitment 2022: ಕೆಪಿಎಸ್​ಸಿ ನೇಮಕಾತಿ: ತಿಂಗಳಿಗೆ ವೇತನ 83 ಸಾವಿರ ರೂ.
KPSC Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 19, 2022 | 2:39 PM

KPSC Recruitment 2022: ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿ ಗ್ರೂಪ್‌ ‘ಬಿ’ ವೃಂದದ 33 ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಸಹಾಯಕ ನಿರ್ದೇಶಕರು, ಭಾಷಾಂತರಕಾರರು ಮತ್ತು ನಗರ ಯೋಜಕರು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

KPSC Recruitment 2022: ವಿದ್ಯಾರ್ಹತೆ: KPSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್‌ನಲ್ಲಿ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

KPSC Recruitment 2022: ವಯೋಮಿತಿ : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಕನಿಷ್ಠ 18 ವರ್ಷದಿಂದ ಮತ್ತು ಗರಿಷ್ಠ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ವಯೋಮಿತಿ ಸಡಿಲಿಕೆ: SC/ST/Cat-I ಅಭ್ಯರ್ಥಿಗಳು: 05 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

KPSC Recruitment 2022: ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,900/- ರಿಂದ 83,900/-ರೂ.ಗಳ ವರೆಗೆ ವೇತನ ನೀಡಲಾಗುತ್ತದೆ.

KPSC Recruitment 2022: ಆಯ್ಕೆ ಪ್ರಕ್ರಿಯೆ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ಮೂಲ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

KPSC Recruitment 2022: ಅರ್ಜಿ ಶುಲ್ಕ : SC/ST/Cat-I/PWD ಅಭ್ಯರ್ಥಿಗಳು: ಇಲ್ಲ ಮಾಜಿ ಸೈನಿಕ ಅಭ್ಯರ್ಥಿಗಳು: ರೂ. 50/- ಕ್ಯಾಟ್-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳು: ರೂ. 300/- ಸಾಮಾನ್ಯ ವರ್ಗದ ಅಭ್ಯರ್ಥಿಗಳು: ರೂ. 600/- ಪಾವತಿ ವಿಧಾನ: ಆನ್‌ಲೈನ್

KPSC Recruitment 2022: ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29-03-2022 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-04-2022 ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29-04-2022

KPSC Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ kpsc.kar.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(KPSC Recruitment 2022 – Apply Online for 33 Group ‘B’)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್