KPSC recruitment 2022: ಕರ್ನಾಟಕ ಸರ್ಕಾರಿ ನೌಕರಿ: ತಿಂಗಳ ವೇತನ 70 ಸಾವಿರ ರೂ.

KPSC recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ kpsc.kar.nic.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

KPSC recruitment 2022: ಕರ್ನಾಟಕ ಸರ್ಕಾರಿ ನೌಕರಿ: ತಿಂಗಳ ವೇತನ 70 ಸಾವಿರ ರೂ.
KPSC recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 30, 2022 | 4:46 PM

KPSC recruitment 2022: ಕರ್ನಾಟಕ ಲೋಕಸೇವಾ ಆಯೋಗದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ kpsc.kar.nic.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 5

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ
Image
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಈ ಹುದ್ದೆಗಳಿಗೆ18 ರಿಂದ ಗರಿಷ್ಟ 35 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರ-2ಎ, ಪ್ರ-2ಬಿ, ಪ್ರ-3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಇರಲಿದೆ. ಹಾಗೆಯೇ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ದಾಖಲೆಯ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/- ರಿಂದ 70,850/-ರೂ.ವರೆಗೆ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ 600 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಇದಾಗ್ಯೂ ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 300 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಿದರೆ ಸಾಕು. ಹಾಗೆಯೇ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ- ಆಗಸ್ಟ್ 1, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 30, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ kpsc.kar.nic.in ಗೆ ಭೇಟಿ ನೀಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ