KPSC recruitment 2022: ಕರ್ನಾಟಕ ಲೋಕಸೇವಾ ಆಯೋಗದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ kpsc.kar.nic.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 5
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ18 ರಿಂದ ಗರಿಷ್ಟ 35 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರ-2ಎ, ಪ್ರ-2ಬಿ, ಪ್ರ-3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಇರಲಿದೆ. ಹಾಗೆಯೇ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ದಾಖಲೆಯ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/- ರಿಂದ 70,850/-ರೂ.ವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ 600 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಇದಾಗ್ಯೂ ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 300 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಿದರೆ ಸಾಕು. ಹಾಗೆಯೇ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿದೆ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ- ಆಗಸ್ಟ್ 1, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 30, 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ kpsc.kar.nic.in ಗೆ ಭೇಟಿ ನೀಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.