KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Jul 30, 2023 | 2:31 PM

KPSC Recruitment 2023: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
KPSC Recruitment 2023
Follow us on

KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗವು (KPSC) ಜೂನಿಯರ್ ಪ್ರೋಗ್ರಾಮರ್, ನೆಟ್‌ವರ್ಕ್ ಅಡ್ಮಿನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 31 ರೊಳಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಯ ವಿವರಗಳು:

  • ಸಂಸ್ಥೆಯ ಹೆಸರು : ಕರ್ನಾಟಕ ಲೋಕಸೇವಾ ಆಯೋಗ ( KPSC )
  • ಹುದ್ದೆಗಳ ಸಂಖ್ಯೆ: 4
  • ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
  • ಹುದ್ದೆಯ ಹೆಸರು: ಜೂನಿಯರ್ ಪ್ರೋಗ್ರಾಮರ್, ನೆಟ್‌ವರ್ಕ್ ಅಡ್ಮಿನ್

ಹುದ್ದೆಗಳ ವಿಭಾಗ:

  • ಜೂನಿಯರ್ ಪ್ರೋಗ್ರಾಮರ್- 1
  • ಡೇಟಾ ಬೇಸ್ ಅಡ್ಮಿನ್- 1
  • ನೆಟ್‌ವರ್ಕ್ ಅಡ್ಮಿನ್- 1
  • ಹಾರ್ಡ್‌ವೇರ್ ಟೆಕ್ನಿಷಿಯನ್- 1

ಶೈಕ್ಷಣಿಕ ಅರ್ಹತೆ:

  • ಜೂನಿಯರ್ ಪ್ರೋಗ್ರಾಮರ್: ಎಂಜಿನಿಯರಿಂಗ್/ಟೆಕ್ನಾಲಜಿಯಲ್ಲಿ ಪದವಿ ಮಾಡಿರಬೇಕು.
  • ಡೇಟಾ ಬೇಸ್ ಅಡ್ಮಿನ್: ಎಂಜಿನಿಯರಿಂಗ್/ಟೆಕ್ನಾಲಜಿಯಲ್ಲಿ ಪದವಿ ಮಾಡಿರಬೇಕು.
  • ನೆಟ್‌ವರ್ಕ್ ಅಡ್ಮಿನ್: ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್‌ನಲ್ಲಿ ಎಂಜಿನಿಯರಿಂಗ್/
  • ಟೆಕ್ನಾಲಜಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು
  • ಹಾರ್ಡ್‌ವೇರ್ ಟೆಕ್ನಿಷಿಯನ್: ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಸಂವಹನದಲ್ಲಿ ಎಂಜಿನಿಯರಿಂಗ್/ಟೆಕ್ನಾಲಜಿಯಲ್ಲಿ ಪದವಿ ಮಾಡಿರಬೇಕು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-ಜುಲೈ-2023

ಅರ್ಜಿ ಕಳುಹಿಸಬೇಕಾದ ವಿಳಾಸ:

Sri Suralkar Vikas Kishor, Secretary, Karnataka Public Service Commission, Udyoga Soudha, Bengaluru – 560001.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: kpsc.kar.nic.in