KPSC Recruitment 2023: ಕೆಪಿಎಸ್​ಸಿ ನೇಮಕಾತಿ: ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿ

KPSC Recruitment 2023: ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್​ಸೈಟ್ kpscrecruitment.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

KPSC Recruitment 2023: ಕೆಪಿಎಸ್​ಸಿ ನೇಮಕಾತಿ: ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿ
KPSC Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on:Mar 20, 2023 | 3:11 PM

KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗವು ಸಹಕಾರ ಸಂಘಗಳ ಇನ್ಸ್‌ಪೆಕ್ಟರ್ (HK) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 53 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಮೇ 2 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಇನ್ನು ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್​ಸೈಟ್ kpscrecruitment.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ, ಆಯ್ಕೆಯಾದರೆ ಸಿಗುವ ವೇತನ, ವಯೋಮಿತಿ ಕುರಿತಂತೆ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಕರ್ನಾಟಕ ಲೋಕಸೇವಾ ಆಯೋಗ ( KPSC )
  • ಹುದ್ದೆಗಳ ಸಂಖ್ಯೆ: 53
  • ಉದ್ಯೋಗ ಸ್ಥಳ: ಕರ್ನಾಟಕ
  • ಹುದ್ದೆಯ ಹೆಸರು: ಸಹಕಾರ ಸಂಘಗಳ ಇನ್ಸ್‌ಪೆಕ್ಟರ್ (HK)

ಅರ್ಹತಾ ಮಾನದಂಡಗಳು:

ಶೈಕ್ಷಣಿಕ ಅರ್ಹತೆ:

KPSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕೃಷಿ ವಿಜ್ಞಾನ, ಮಾರ್ಕೆಟಿಂಗ್ ಮತ್ತು ಸಹಕಾರ, ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷದೊಳಗಿರಬೇಕು.

ವಯೋಮಿತಿ ಸಡಿಲಿಕೆ:

  • SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷಗಳು
  • Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷಗಳು
  • PH/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:

  • SC/ST/Cat-I ಮತ್ತು PH ಅಭ್ಯರ್ಥಿಗಳಿಗೆ: ರೂ.35/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ.85/-
  • Cat-2A/2B/3A & 3B ಅಭ್ಯರ್ಥಿಗಳಿಗೆ: ರೂ.335/-
  • ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.635/-

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 27650 ರಿಂದ 52650/- ರೂ. ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ0- ಮೇ 2, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 3:10 pm, Mon, 20 March 23

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್