KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗವು ಸಹಕಾರ ಸಂಘಗಳ ಇನ್ಸ್ಪೆಕ್ಟರ್ (HK) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 53 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಮೇ 2 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಇನ್ನು ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ kpscrecruitment.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ, ಆಯ್ಕೆಯಾದರೆ ಸಿಗುವ ವೇತನ, ವಯೋಮಿತಿ ಕುರಿತಂತೆ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಅರ್ಹತಾ ಮಾನದಂಡಗಳು:
ಶೈಕ್ಷಣಿಕ ಅರ್ಹತೆ:
KPSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕೃಷಿ ವಿಜ್ಞಾನ, ಮಾರ್ಕೆಟಿಂಗ್ ಮತ್ತು ಸಹಕಾರ, ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷದೊಳಗಿರಬೇಕು.
ವಯೋಮಿತಿ ಸಡಿಲಿಕೆ:
ಅರ್ಜಿ ಶುಲ್ಕ:
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 27650 ರಿಂದ 52650/- ರೂ. ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಈ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ0- ಮೇ 2, 2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 3:10 pm, Mon, 20 March 23