KPTCL Recruitment 2022: ಕೆಪಿಟಿಸಿಎಲ್ನಲ್ಲಿ 1492 ಹುದ್ದೆಗಳಿಗೆ ಅರ್ಜಿ ಆಹ್ವಾನ
KPTCL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸ್ನಾತಕೋತ್ತರ ಪದವಿ (BE/B.Tech) ಮತ್ತು 12ನೇ ತರಗತಿಯ ಪಾಸಾಗಿರಬೇಕು.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ( KPTCL ) ಇಲಾಖೆಯು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ವಿಭಾಗದಲ್ಲಿ ಒಟ್ಟು 1492 ಹುದ್ದೆಗಳು ಖಾಲಿಯಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ( Online ) ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.
ಹುದ್ದೆಗಳ ವಿವರ ಮತ್ತು ಸಂಖ್ಯೆ:
ಸಹಾಯಕ ಇಂಜಿನಿಯರ್ (ವಿದ್ಯುತ್) -508 ಹುದ್ದೆಗಳು
ಸಹಾಯಕ ಇಂಜಿನಿಯರ್ (ಸಿವಿಲ್)-28 ಹುದ್ದೆಗಳು
ಕಿರಿಯ ಇಂಜಿನಿಯರ್ (ವಿದ್ಯುತ್) -570 ಹುದ್ದೆಗಳು
ಕಿರಿಯ ಇಂಜಿನಿಯರ್ (ಸಿವಿಲ್)-29 ಹುದ್ದೆಗಳು
ಕಿರಿಯ ಸಹಾಯಕ -360 ಹುದ್ದೆಗಳು
ವಯೋಮಿತಿ: KPTCL ನೇಮಕಾತಿಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯಸ್ಸು 35 ರ ಒಳಗಿರಬೇಕು. ಇನ್ನು SC/ST ಮತ್ತು ವರ್ಗ-I ಅರ್ಜಿದಾರರಿಗೆ ಗರಿಷ್ಠ ವಯಸ್ಸಿನ ಮಿತಿ 40 ವರ್ಷಗಳು ಎಂದು ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸ್ನಾತಕೋತ್ತರ ಪದವಿ (BE/B.Tech) ಮತ್ತು 12ನೇ ತರಗತಿಯ ಪಾಸಾಗಿರಬೇಕು.
ಆಯ್ಕೆ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆರಂಭದಲ್ಲಿ ಲಿಖಿತ ಪರೀಕ್ಷೆ ಇರಲಿದ್ದು, ಇದರಲ್ಲಿ ಉತ್ತೀರ್ಣರಾದವರು ಮಾತ್ರ ಸಂದರ್ಶನದ ಹಂತಕ್ಕೆ ಅರ್ಹತೆ ಪಡೆಯುತ್ತಾರೆ/
ಮತ್ತಷ್ಟು ಮಾಹಿತಿ: ಈ ನೇಮಕಾತಿ ಕುರಿತಾದ ಅಧಿಕೃತ ಅಧಿಸೂಚನೆ ಫೆಬ್ರವರಿ 7 ರಂದು ಬಿಡುಗಡೆಯಾಗಲಿದ್ದು, ಆಸಕ್ತ ಅಭ್ಯರ್ಥಿಗಳು https://kptcl.karnataka.gov.in ಗೆ ಭೇಟಿ ಹೆಚ್ಚಿನ ಮಾಹಿತಿ ಪಡೆಯಬಹುದು.
ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ
ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ
ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್
(KPTCL Recruitment 2022 Apply Online for 1492)