Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಉದ್ಯೋಗಾವಕಾಶ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

KPTCL Recruitment 2024: ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿನ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಎಸ್​ಎಸ್​ಎಲ್​ಸಿ ಪಾಸಾದವರು ಅರ್ಜಿ ಸಲ್ಲಿಸಬಹುದು.

ಸರ್ಕಾರಿ ಉದ್ಯೋಗಾವಕಾಶ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
KPTCL Recruitment 2024
Follow us
ಝಾಹಿರ್ ಯೂಸುಫ್
|

Updated on: Oct 20, 2024 | 3:15 PM

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ( KPTCL ) ಇಲಾಖೆಯು ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಮೂಲಕ ಜೂನಿಯರ್ ಸ್ಟೇಷನ್ ಅಟೆಂಡೆಂಟ್, ಜೂನಿಯರ್ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ…

  • ಸಂಸ್ಥೆಯ ಹೆಸರು : ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ( KPTCL )
  • ಒಟ್ಟು ಹುದ್ದೆಗಳ ಸಂಖ್ಯೆ: 2975
  • ಉದ್ಯೋಗ ಸ್ಥಳ: ಕರ್ನಾಟಕ
  • ಹುದ್ದೆಗಳ ಹೆಸರು: ಜೂನಿಯರ್ ಸ್ಟೇಷನ್ ಅಟೆಂಡೆಂಟ್, ಜೂನಿಯರ್ ಪವರ್‌ಮ್ಯಾನ್

ಹುದ್ದೆಗಳ ವಿವರ:

  • ಜೂನಿಯರ್ ಪವರ್‌ಮ್ಯಾನ್: 2542
  • ಜೂನಿಯರ್ ಸ್ಟೇಷನ್ ಅಟೆಂಡೆಂಟ್: 433

KPTCL ಹುದ್ದೆಯ ವಿವರಗಳು

ಇಲಾಖಾ ಹೆಸರು ಸಾಮಾನ್ಯ ಹುದ್ದೆಗಳು ಬ್ಯಾಕ್‌ಲಾಗ್ ಹುದ್ದೆಗಳು ಒಟ್ಟು
ಕೆಪಿಟಿಸಿಎಲ್ 475 48 523
ಬೆಸ್ಕಾಂ 640 295 935
CESC ಮೈಸೂರು 270 39 309
ಹೆಸ್ಕಾಂ 500 60 560
ಮೆಸ್ಕಾಂ 415 34 449
GESCOM 100 99 199
ಒಟ್ಟು 2400 575 2975

ಶೈಕ್ಷಣಿಕ ಅರ್ಹತೆ:

  • 10ನೇ ತರಗತಿ (ಎಸ್​ಎಸ್​ಎಲ್​ಸಿ) ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ:

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ನವೆಂಬರ್ 20, 2024 ರಂತೆ ಕನಿಷ್ಠ 18 ವರ್ಷಗಳಾಗಿರಬೇಕು. ಹಾಗೆಯೇ ಗರಿಷ್ಠ 35 ವರ್ಷಗಳನ್ನು ದಾಟಿರಬಾರದು.

ವಯೋಮಿತಿ ಸಡಿಲಿಕೆ:

  • SC/ST/Cat-I ಅಭ್ಯರ್ಥಿಗಳಿಗೆ: 5 ವರ್ಷಗಳು
  • Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷಗಳು

ವೇತನ:

  • ಮೊದಲ ವರ್ಷದ ತಿಂಗಳ ಸಂಬಳ: ರೂ.17000 ರಿಂದ 63000/-
  • ಎರಡನೇ ವರ್ಷದಿಂದ ತಿಂಗಳ ಸಂಬಳ: ರೂ. 19,000/- 63000/-
  • ಮೂರನೇ ವರ್ಷದಿಂದ ತಿಂಗಳ ಸಂಬಳ: ರೂ. 21,000/ ರಿಂದ 63000/-

ಅರ್ಜಿ ಶುಲ್ಕ:

  • PWD ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕವಿಲ್ಲ
  • SC/ST ಅಭ್ಯರ್ಥಿಗಳಿಗೆ: ರೂ.378/-
  • ಸಾಮಾನ್ಯ/ಕ್ಯಾಟ್-I/2A/2B/3A & 3B ಅಭ್ಯರ್ಥಿಗಳಿಗೆ: ರೂ.614/-
  • ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:

  • ಮೆರಿಟ್ ಪಟ್ಟಿ (ಅಂಕಗಳು), ಸಹಿಷ್ಣುತೆ ಪರೀಕ್ಷೆ, ದಾಖಲೆಗಳ ಪರಿಶೀಲನೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 21-10-2024
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-ನವೆಂಬರ್-2024
  • ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25 ನವೆಂಬರ್ 2024

ಪ್ರಮುಖ ಲಿಂಕ್​ಗಳು:

700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್