KPTCL Recruitment 2024 : ಕಿರಿಯ ಪವರ್‌ಮ್ಯಾನ್ ಹಾಗೂ ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆಗಳ ನೇಮಕಾತಿ, ಇಲ್ಲಿದೆ ಮಾಹಿತಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Oct 29, 2024 | 2:36 PM

ಕೈಯಲ್ಲಿ ಕೆಲಸ ಇಲ್ಲದೇ ಖಾಲಿ ಕೂತಿದ್ದೀರಾ, ಉದ್ಯೋಗ ಹುಡುಕುತ್ತಿರುವವರಿಗಾಗಿ ಇದೀಗ ಸುವರ್ಣವಕಾಶವೊಂದು ಒದಗಿ ಬಂದಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್‌ಮ್ಯಾನ್ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

KPTCL Recruitment 2024 : ಕಿರಿಯ ಪವರ್‌ಮ್ಯಾನ್ ಹಾಗೂ ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆಗಳ ನೇಮಕಾತಿ, ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us on

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್‌ಮ್ಯಾನ್ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಲಸ ಮಾಡಲು ಇಷ್ಟವಿಲ್ಲದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

* ಹುದ್ದೆ : ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್‌ಮ್ಯಾನ್

* ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

* ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2,975 ಹುದ್ದೆಗಳು

* ಕಿರಿಯ ಸ್ಟೇಷನ್ ಪರಿಚಾರಕ : 433 ಹುದ್ದೆ

* ಕಿರಿಯ ಪವರ್‌ಮ್ಯಾನ್ : 2542 ಹುದ್ದೆ

* ವೇತನ : ಅಭ್ಯರ್ಥಿಗಳಿಗೆ 1ನೇ ವರ್ಷ ಮಾಸಿಕ ರೂ. 17,000, 2ನೇ ವರ್ಷ ಮಾಸಿಕ ರೂ. 19,000, 3ನೇ ವರ್ಷ ಮಾಸಿಕ ರೂ. 21,000 ರಂತೆ ಮಾಸಿಕ ವೇತನವಿರುತ್ತದೆ. ಮೂರು ವರ್ಷದ ತರಬೇತಿಯನ್ನು ತೃಪ್ತಿಕರವಾಗಿ ಪೂರೈಸಿದ ನಂತರ ಅಭ್ಯರ್ಥಿಗಳಿಗೆ ಮಾಸಿಕ ರೂ. 28,550 ರಿಂದ ರೂ. 63,000 ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು

* ಎಸ್.ಎಸ್.ಎಲ್.ಸಿ. ಅಥವಾ 10ನೇ ತರಗತಿಯ (ಸಿ.ಬಿ.ಎಸ್.ಇ/ ಐ.ಸಿ.ಎಸ್.ಇ) ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರಬೇಕು.

* * ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.

* ಸಾಮಾನ್ಯ ವರ್ಗದ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳ ವಯಸ್ಸು ಗರಿಷ್ಠ 38 ವರ್ಷ ಹಾಗೂ ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

* ಅರ್ಜಿ ಸಲ್ಲಿಸಿದ ಅಭ್ಯರ್ಥಿಯೂ ಸಹನ ಶಕ್ತಿ ಪರೀಕ್ಷೆಯಲ್ಲಿ ವೇಳೆ ಕನಿಷ್ಠ ಮೂರು ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಬೇಕು.

* ಎಸ್.ಎಸ್.ಎಲ್.ಸಿ ಅಥವಾ 10ನೇ ತರಗತಿಯ ಪರೀಕ್ಷೆಯ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳ ಆಧಾರದ ಮೇಲೆ ಕರ್ನಾಟಕ ಸರ್ಕಾರದಲ್ಲಿ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ನು ಪಾಲಿಸಿ, ಆಯ್ಕೆ ಮಾಡಲಾಗುವುದು.

* ಸಹನ ಶಕ್ತಿ ಪರೀಕ್ಷೆ :

* ವಿದ್ಯುತ್ ಕಂಬ ಹತ್ತುವುದು – 8 ಮೀಟರ್ ಎತ್ತರ (ಕಡ್ಡಾಯ)

* 100 ಮೀಟರ್ ಓಟ – 14 ಸೆಕೆಂಡ್‌ಗಳು

* ಸ್ಕಿಪ್ಪಿಂಗ್ – ಒಂದು ನಿಮಿಷಕ್ಕೆ 50 ಬಾರಿ

* ಶಾಟ್‌ಫುಟ್ (12 ಪೌಂಡ್‌ಗಳು) – 8 ಮೀಟ‌ರ್ ಎಸೆತ (3 ಅವಕಾಶಗಳು)

* 800 ಮೀಟರ್ ಓಟ – 3 ನಿಮಿಷಗಳು

ನಿಗದಿತ ಅರ್ಜಿ ಶುಲ್ಕದ ವಿವರ

• ಸಾಮಾನ್ಯ ವರ್ಗ, ಪ್ರವರ್ಗ1, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ. 614, ಪ.ಜಾತಿ, ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ರೂ. 378 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಇದನ್ನೂ ಓದಿ: ನೈಋತ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಅರ್ಜಿ ಸಲ್ಲಿಸುವುದು ಹೇಗೆ?

* ಆನ್‌ಲೈನ್‌ ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳುತ್ತದೆ.

* ಅರ್ಜಿಯಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ, ಒಮ್ಮೆ ಪರಿಶೀಲಿಸಿ.

* ಅರ್ಜಿಯೊಂದಿಗೆ ಅಗತ್ಯವಿರುವ ಪ್ರಮಾಣ ಪತ್ರಗಳು ಸೇರಿದಂತೆ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
* ಅಭ್ಯರ್ಥಿಗಳು ಅಂಚೆ ಕಚೇರಿಗಳ ಮುಖಾಂತರ ಶುಲ್ಕ ಪಾವತಿಸಿಸಿ.

*ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಪ್ರಮುಖ ದಿನಾಂಕಗಳು-

* ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 21, 2024

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 20, 2024

* ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 25, 2024

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ